

ಮಂಗಳೂರು: ನಗರದ ಜಿಲ್ಲಾ ಕಾರಾಗೃಹಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ನೇತೃತ್ವದ ತಂಡ ಭಾನುವಾರ ಬೆಳಗ್ಗೆ ದೀಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿತು.
ಜೈಲಿನಲ್ಲಿ ಅಕ್ರಮ ಚಟುವಟಿಕೆ ಮಾಹಿತಿ ಹಿನ್ನೆಲೆಯಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸ್ ಮೂಲ ತಿಳಿಸಿದೆ.
ಡಿಸಿಪಿ, ಎಸಿಪಿ, ಇನ್ಸ್ಪೆಕ್ಟರ್, ಪಿಎಸ್‌ಐ ಸೇರಿದಂತೆ 180 ಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ ತಂಡದಲ್ಲಿದ್ದರು.