ಮಂಗಳೂರು ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ

IMG-20220303-WA0009
Published on

ಮಂಗಳೂರು: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಎ.ಜೆ. ಇನ್ಸಿಟ್ಯೂಟ್ ಆಫ್ ಎಂಜಿನಿಯರ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳಕ್ಕೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿನ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಗುರುವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಮೇಯರ್ ಪ್ರೇಮಾನಂದ ಶೆಟ್ಟಿ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಕೌಶಲ್ಯಾಭಿವೃದ್ದಿ ಇಲಾಖೆಯ ಹೇಮಚಂದ್ರ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net