ಕಡಬ ತಾಲೂಕು ಐತ್ತೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಲಂಚ ಸ್ವೀಕಾರ ಆರೋಪ ಸಾಬೀತು ಅಪರಾಧಿಗೆ 3 ವರ್ಷ ಜೈಲು

Gavel on desk. Isolated with good copy space. Dramatic lighting.
Gavel on desk. Isolated with good copy space. Dramatic lighting.
Published on

ಮಂಗಳೂರು: ಲಂಚ ಸ್ವೀಕಾರ ಸಂದರ್ಭ ಭ್ರಷ್ಟಾಚಾರ ನಿಗ್ರಹದಳದಿಂದ ಬಂಧನಕ್ಕೊಳಗಾಗಿದ್ದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯ ಆರೋಪ ಸಾಬೀತಾಗಿದ್ದು, 3 ವರ್ಷ ಜೈಲು ಹಾಗೂ 50 ಸಾವಿರ ರೂ. ದಂಡ ವಿಧಿಸಿ ಶುಕ್ರವಾರ ನ್ಯಾಯಾಲಯ ತೀರ್ಪು ನೀಡಿದೆ.

ಕಡಬ ತಾಲೂಕು ಐತ್ತೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಆಗಿದ್ದ ಪ್ರೇಮ್ ಸಿಂಗ್ ನಾಯ್ಕ ಶಿಕ್ಷೆಗೊಳಗಾದವನು.

ಪ್ರಕರಣದ ವಿವರ: ಅಪರಾಧಿ 2019 ಜೂ.3ರಂದು 9 ಸಾವಿರ ರೂ. ಲಂಚ ಸ್ವೀಕಾರ ಮಾಡುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾ

ಂಡ್ ಆಗಿ ಪತ್ತೆ ಮಾಡಿ ಬಂಧಿಸಿದ್ದರು. ಪ್ರಕರಣ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಶುಕ್ರವಾರ ಶಿಕ್ಷೆ ಪ್ರಕಟಿಸಿದ್ದಾರೆ

.

ಪೊಲೀಸ್ ಇನ್‌ಸ್ಪೆಕ್ಟರ್ ಶ್ಯಾಂ ಸುಂದರ್ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ಸರ್ಕಾರದ ಪರವಾಗಿ ವಾದಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net