

ಮಂಗಳೂರು: ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಕೌಶಲ್ಯಬಿವ್ರದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ದಕ್ಷಿಣ ಕನ್ನಡ ಇವರ ಸಹಬಾಗಿತ್ವದಲ್ಲಿ 5 ದಿನಗಳ ತೆಂಗು ಮೌಲ್ಯವರ್ಧಿತ ಕೌಶಲ್ಯ ತರಬೇತಿಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ಸಂಜೀವಿನಿ ತಾಲೂಕು ವ್ಯವಸ್ಥಾಪಕ ಸುಬ್ರಮಣ್ಯ ಕಾರ್ಯಕ್ರಮ ಉದ್ಘಾಟಿಸಿ, ತರಬೇತಿಯಲ್ಲಿ ಭಾಗವಹಿಸುವ ರೈತ ಮಹಿಳೆಯರು ಸ್ವ ಉದ್ಯೋಗ ಮಾಡುವಲ್ಲಿ ಹೆಚ್ಚಿನ ಗಮನ ಹರಿಸಲು ಕರೆ ನೀಡಿದರು.
ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಖಿ. ಎ. ರಮೇಶ್, ತೆಂಗಿನ ಮೌಲ್ಯ ವರ್ಧಿತ ಉತ್ಪನ್ನಗಳು, ಸ್ವ ಉದ್ಯೋಗದ ಅವಕಾಶಗಳು, ಹಾಗೂ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಿಗುವ ತರಬೇತಿ ಬಗ್ಗೆ ಮಾಹಿತಿ ನೀಡಿದರು.
ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಅವರು ತರಬೇತಿ ಕಾರ್ಯಕ್ರಮದ ನಿಯಮಗಳ ಬಗ್ಗೆ ತಿಳಿಸಿದರು.
ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ. ಮಲ್ಲಿಕಾರ್ಜುನ, ಸಂಪನ್ಮೂಲ ವ್ಯಕ್ತಿಗಳಾದ ದಿನೇಶ್ ಉಪಸ್ಥಿತರಿದ್ದರು. ಸಂಜೀವಿನಿ ವಲಯ ಮೇಲ್ವಿಚಾರಕರಾದ ನಿಖಿಲ್ ಸ್ವಾಗತಿಸಿದರು. ಮಂಗಳೂರು ತಾಲೂಕಿನ ವಿವಿಧ ಪಂಚಾಯತ್ನ 30 ರೈತ ಮಹಿಳೆಯರು 5 ದಿನದ ತರಬೇತಿಯಲ್ಲಿ ಭಾಗವಹಿಸುತ್ತಿದ್ದಾರೆ.