ಗುತ್ತಿಗೆದಾರನಿಗೆ ಬಿಲ್ ಪಾವತಿಗೆ ಲಂಚ ಸ್ವೀಕಾರ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

mng--19 sep M R swami
Published on

ಮಂಗಳೂರು: ಕಾಮಗಾರಿಯ ಬಿಲ್ ಮಂಜೂರು ಮಾಡಲು ಲಂಚ ಸ್ವೀಕರಿಸಿದ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಜೂನಿಯರ್ ಇಂಜಿಯರ್ ನಾಗರಾಜು ಹಾಗೂ ಮುಖ್ಯಾಧಿಕಾರಿ ಎಂ.ಆರ್. ಸ್ವಾಮಿ ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದಾರೆ.


ಗುತ್ತಿಗೆದಾರರೊಬ್ಬರು 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಸ್ ಕೋಡಿ ಸರ್ಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿ ಗುತ್ತಿಗೆ ಕೆಲಸವನ್ನು ನಿರ್ವಹಿಸಿದ್ದರು. ಇದರ ಬಿಲ್ 9,77,154 ರೂ. ಪಾಸ್ ಮಾಡಲು ನಾಗರಾಜು 37 ಸಾವಿರ ರೂ. ಹಾಗೂ ಮುಖ್ಯಾಧಿಕಾರಿ ಎಂ.ಆರ್. ಸ್ವಾಮಿಗೆ 15 ಸಾವಿರ ರೂ. ನೀಡಬೇಕು ಎಂದು ಬೇಡಿಕೆ ಇಟ್ಟಿದ್ದರು. ನಾಗರಾಜು 7 ಸಾವಿರ ರೂ. ಮುಂಚಿತವಾಗಿ ಪಡೆದುಕೊಂಡಿದ್ದ.


ಜೂನಿಯರ್ ಇಂಜಿನಿಯರ್ ನಾಗರಾಜು 30,000 ರೂ. ಮುಖ್ಯಾಧಿಕಾರಿ ಎಂ.ಆರ್. ಸ್ವಾಮಿ 15,000 ರೂ. ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.


ಲೋಕಾಯುಕ್ತ ಎಸ್ಪಿ ಎಂ.ಎ. ನಟರಾಜ್ ಅವರ ಮಾರ್ಗದರ್ಶನದಲ್ಲಿ, ಉಪಾಧೀಕ್ಷಕಿ ಡಾ.ಗಾನ ಪಿ. ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾಎ, ಸುರೇಶ್ ಕುಮಾರ್ ಪಿ., ಚಂದ್ರಶೇಖರ್ ಕೆ.ಎನ್, ಚಂದ್ರಶೇಖರ್ ಸಿ.ಎಲ್ ಇವರು ಸಿಬ್ಬಂದಿ ಜೊತೆ ಟ್ರಾೃಪ್ ಕಾರ್ಯಾಚರಣೆ ಕೈಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net