

ಮಂಗಳೂರು: ಮಹಾಕಾವ್ಯ ರಾಮಾಯಣದ ಕರ್ತೃವಾಗಿರುವ ಮಹರ್ಷಿ ವಾಲ್ಮೀಕಿ ಜಗತ್ತಿಗೆ ಜೀವನ ಮೌಲ್ಯ ಸಾರಿದ್ದಾರೆ. ಅವರು ಸದಾ ಸ್ಮರಣೀಯರು ಎಂದು ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮಂಗಳೂರು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ವಾಲ್ಮೀಕಿ ಅವರ ಭಾವಚಿತಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮಾತನಾಡಿದರು.
ವಾಲ್ಮೀಕಿ ಅವರ ಬದುಕು ಮತ್ತು ಸಾಧನೆ ಎಲ್ಲರಿಗೂ ಪ್ರೇರಣೆ. ಯುವ ಜನತೆ ಅವರ ಸಾಧನೆಯನ್ನು ಅರಿತು ಉತ್ತಮ ಜೀವನ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಬಸವರಾಜು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಅಡಿಗ, ಮಂಗಳೂರು ದಕ್ಷಿಣ ಬಿಇಓ ಈಶ್ವರ್ ಮೊದಲಾದವರಿದ್ದರು.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.