

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಬಿಜೆಪಿಯ ಪೂರ್ಣಿಮಾ ಆಯ್ಕೆಯಾಗಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ ನಡೆದು ಫಲಿತಾಂಶ ಪ್ರಕಟಗೊಂಡಿದೆ.
ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನೂತನ ಮೇಯರ್ ಹಾಗೂ ಉಪ ಮೇಯರ್ಗಳ ಹೆಸರನ್ನು ಘೋಷಿಸಿದರು.
ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಮಹಾನಗರ ಪಾಲಿಕೆಯ ಕಾರ್ಪೊರೇಟರ್ಗಳು ಚುನಾವಣೆಯಲ್ಲಿ ಭಾಗವಹಿಸಿದ್ದರು.
ಒಟ್ಟು 65 ಸದಸ್ಯ ಬಲದ ಮಹಾನಗರ ಪಾಲಿಕೆಯಲ್ಲಿ 62 ಸದಸ್ಯರು ಚುನಾವಣೆಗೆ ಹಾಜರಾಗಿದ್ದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಇತರೆ ಚುನಾವಣಾ ಪ್ರಕ್ರಿಯೆ ಅಧಿಕಾರಿಗಳು ಭಾಗವಹಿಸಿದ್ದರು.