

ಮಂಗಳೂರು : ವೃತ್ತಿಯಲ್ಲಿ ಆಸಕ್ತಿ ಹೊಂದಿ ಆಳವಾಗಿ ಪ್ರೀತಿಸುವ ಜತೆಗೆ ಪ್ರಾಮಾಣಿಕತೆ, ನಿರಂತರ ಪರಿಶ್ರಮ, ಬದ್ಧತೆ ಇಟ್ಟುಕೊಂಡು ಮುನ್ನಡೆದಾಗ ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸು ಸಿಗಲು ಸಾಧ್ಯ ಎಂದು ಮಂಗಳೂರು ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷ ಪ್ರೊ. ಎಂ.ಬಿ.ಪುರಾಣಿಕ್ ಹೇಳಿದರು.
ನಗರದ ಸಂತ ಅಲೋಶಿಯಸ್ ಪಿಯು ಕಾಲೇಜಿನ ಲೊಯೆಲಾ ಸಭಾಂಗಣದಲ್ಲಿ ಭಾನುವಾರ ದ.ಕ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘ ಮಂಗಳೂರು ಹಾಗೂ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು ಮಂಗಳೂರು ವತಿಯಿಂದ ವಿಧಾನ ಪರಿಷತ್‌ಗೆ ಎರಡನೇ ಬಾರಿಗೆ ಆಯ್ಕೆಯಾದ ಎಸ್.ಎಲ್. ಭೋಜೇಗೌಡ ಅವರಿಗೆ ಅಭಿನಂದನೆ ಮತ್ತು ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ ಕಾರ‌್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಮಂಗಳೂರು ಕಥೋಲಿಕ್ ಶಿಕ್ಷಣ ಸಂಸ್ಥೆಗಳ ಕಾರ‌್ಯದರ್ಶಿ ಾ. ಪ್ರವೀಣ್ ಲಿಯೋ ಲಸ್ರಾದೋ ಮಾತನಾಡಿ, ಶಿಕ್ಷಣದಲ್ಲಿ ಜಾಗತಿಕ ಮಟ್ಟದಲ್ಲಿ ನಮ್ಮ ಸ್ಥಾನ ಕುಸಿಯುತ್ತಿದೆ. ಗುಣಮಟ್ಟದವನ್ನು ಮತ್ತಷ್ಟು ಎತ್ತರಕ್ಕೆ ಏರಿಸಲು ಸರ್ಕಾರ, ಜನಪ್ರತಿನಿಧಿಗಳು ಹಾಗೂ ಶಿಕ್ಷಣ ತಜ್ಞರು ಕೈ ಜೋಡಿಸುವ ಕೆಲಸ ಮಾಡಬೇಕು ಎಂದರು.
ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿ 2023-24ನೇ ಸಾಲಿನಲ್ಲಿ ನಿವೃತ್ತರಾದ ಎಂಟು ಮಂದಿ ಪ್ರಾಂಶುಪಾಲರನ್ನು ಸನ್ಮಾನಿಸಲಾಯಿತು. ಉಪನ್ಯಾಸಕ ದಿ. ನಂದಕುಮಾರ್ ಅವರ ಕುಟುಂಬಕ್ಕೆ ಆರ್ಥಿಕ ಸಹಾಯ, ಕಾಲೇಜಿನ ಸಿಬ್ಬಂದಿಯೊಬ್ಬರಿಗೆ ವೈದ್ಯಕೀಯ ನೆರವು ನೀಡಲಾಯಿತು. ಈ ಬಳಿಕ ವಿಧಾನ ಪರಿಷತ್‌ಗೆ ಎರಡನೇ ಬಾರಿಗೆ ಆಯ್ಕೆಯಾದ ಎಸ್.ಎಲ್. ಭೋಜೇಗೌಡ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಡಿಡಿಪಿಯು ಜಯಣ್ಣ ಸಿ.ಡಿ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಡಾ.ಉಷಾಪ್ರಭಾ ಎನ್ ನಾಯಕ್, ನೂಜಿಬಾಳ್ತಿಲ ಬೆಥನಿ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಡಾ.ವರ್ಗಿಸ್ ಕೈಪನಡ್ಕ, ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದಕ ಸಭಾಪತಿ ಸಿಎ. ಶಾಂತಾರಾಮ ಶೆಟ್ಟಿ, ಮುಡಿಪು ಸೂರಜ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮಂಜುನಾಥ್ ಎಸ್. ರೇವಣ್‌ಕರ್, ಗುರುವಾಯನಕರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಮಂಗಳೂರು ಶ್ರೀ ಭಾರತಿ ಶಿಕ್ಷಣ ಸಂಸ್ಥೆಗಳ ಕಾರ‌್ಯದರ್ಶಿ ಶ್ರೀಕೃಷ್ಣ ಎನ್, ಬೆಸೆಂಟ್ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ರಾಜಶೇಖರ್ ಹೆಬ್ಬಾರ್, ಕುಂಬ್ರ ಮರ್ಕಝಲ್ ಹುದಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ.ಎಂ. ಅಬ್ದುಲ್ ರಹಿಮಾನ್ ಅರಿಯಡ್ಕ, ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ‌್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲರಾದ ವಿಠಲ್ ಕೆ, ಯೂಸ್ು ಮೊದಲಾದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ‌್ಯಕ್ರಮಗಳು ಜರುಗಿತು. ತುಳುನಾಡಿನ ಸಾಂಪ್ರದಾಯಿಕ ಮತ್ತು ಆಟಿ ತಿಂಗಳ ವಿಶಿಷ್ಟ ಖಾದ್ಯಗಳ ಸಸ್ಯಹಾರ ಉಪಾಹಾರ ಮತ್ತು ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು. ದ.ಕ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘ ಮಂಗಳೂರು ಇದರ ಅಧ್ಯಕ್ಷ ಜಯಾನಂದ ಎನ್ ಸುವರ್ಣ ಸ್ವಾಗತಿಸಿದರು. ಶರ್ಮಿಳಾ, ಉಮೇಶ್ ಹಾಗೂ ರಘುರಾಜ್ ಕಾರ‌್ಯಕ್ರಮ ನಿರೂಪಿಸಿದರು.