ಕಾರು ಢಿಕ್ಕಿ ಹೊಡೆಸಿ ಬೈಕ್ ಚಾಲಕನ ಕೊಲೆ ಯತ್ನ ಪ್ರಕರಣ ಆರೋಪಿಗೆ ನ್ಯಾಯಾಂಗ ಬಂಧನ

arrested
Published on

ಮಂಗಳೂರು: ಪೂರ್ವ ದ್ವೇಷ ಕಾರಣಕ್ಕೆ ಬಿಜೈ ಕಾಪಿಕಾಡ್‌ನ 6ನೇ ಕ್ರಾಸ್‌ನಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆಸಿ ಬೈಕ್ ಚಾಲಕನನ್ನು ಕೊಲೆ ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಸತೀಶ್ ಕುಮಾರ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅಮಾಯಕ ಪಾದಚಾರಿ ಮಹಿಳೆ ಯಲ್ಲವ್ವ ಉಪ್ನಾಳ ಮತ್ತು ಬೈಕ್ ಸವಾರ ಮುರಳಿ ಪ್ರಸಾದ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಿಳೆ ಗುರುವಾರ ಬೆಳಗ್ಗೆ 8.30ರ ವೇಳೆಗೆ ಮನೆ ಕೆಲಸಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

ನೊರೆಹೊರೆಯವರ ಗಲಾಟೆ ಇಷ್ಟೊಂದು ತೀವ್ರತೆಗೆ ಹೋಗಿರುವುದಕ್ಕೆ ಸ್ಥಳೀಯರು ದಿಗ್ಭ್ರಮೆ ವ್ಯಕ್ತ ಪಡಿಸಿದ್ದಾರೆ. ಆರೋಪಿ ಸತೀಶ್ ಕುಮಾರ್ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಇಂತಹ ಘಟನೆ ನಡೆಯಬಾರದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net