ನೀರುಮಾರ್ಗ ಪಂಚಾಯಿತಿಗೆ ನರೇಗಾ ಪ್ರಶಸ್ತಿ

mng--29 Nov Narega Neermarga
Published on

ನೀರುಮಾರ್ಗ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸೆಪ್ಟೆಂಬರ್ 2024ರಲ್ಲಿ ಅತೀ ಹೆಚ್ಚು ಮಾನವ ದಿನಗಳನ್ನು ಸೃಜಿಸಿದ ವಿಭಾಗದಲ್ಲಿ ನೀರುಮಾರ್ಗ ಗ್ರಾಮ ಪಂಚಾಯಿತಿಗೆ ಪ್ರಥಮ ಬಹುಮಾನ ಲಭಿಸಿದೆ.

ಮಂಗಳೂರು ತಾಲೂಕಿನಲ್ಲಿಯೇ ನೀರುಮಾರ್ಗ ಗ್ರಾಮವು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಉತ್ತಮ ಪ್ರಗತಿ ಕಂಡಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ಅವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬೂಬಕ್ಕರ್ ಅವರಿಗೆ ಪ್ರಶಂಸಾ ಪತ್ರವನ್ನು ವಿತರಿಸಿ, ಅಭಿನಂದಿಸಿದರು. ಈ ಸಂದರ್ಭ ಉದ್ಯೋಗ ಖಾತರಿಯ ಮಂಗಳೂರು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್ಲು, ಪಂಚಾಯಿತಿ ಲೆಕ್ಕ ಸಹಾಯಕರಾದ ಉಮಾನಾಥ ಕೋನಿಮಾರ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net