ಪದುವ ಲಾರಿ ಡಿಕ್ಕಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

accident-15
Published on

ಮಂಗಳೂರು: ನಂತೂರು-ಕೆಪಿಟಿ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಪದುವ ಜಂಕ್ಷನ್ ಬಳಿ ಮಂಗಳವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಅಡ್ಯಾರು ಕಣ್ಣಗುಡ್ಡೆ ನಿವಾಸಿ ಶಿವಾನಂದ (42) ಮೃತಪಟ್ಟವರು. ಅಡ್ಯಾರ್ ಕಣ್ಣೂರಿನಲ್ಲಿ ವಾಚ್ ಬಿಡಿ ಭಾಗಗಳ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ಕಾರ್ಯ ನಿಮಿತ್ತ ನಂತೂರು ವೃತ್ತದ ಮೂಲಕ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಸುನೀತ್ ಕೆ. ಎಂಬಾತ ಚಲಾಯಿಸಿಕೊಂಡು ಬಂದ ಟ್ಯಾಂಕರ್ ಸ್ಕೂಟರ್‌ನ ಬಲಭಾಗಕ್ಕೆ ಡಿಕ್ಕಿಯಾಗಿದೆ. ನಿಯಂತ್ರಣ ಕಳೆದುಕೊಂಡು ಶಿವಾನಂದ ಅವರು ಸ್ಕೂಟರ್ ಸಮೇತ ಹೆದ್ದಾರಿಗೆ ಬಿದ್ದಾಗ ಟ್ಯಾಂಕರ್‌ನ ಎಡ ಹಿಂಭಾಗದ ಚಕ್ರ ಅವರ ತಲೆಯ ಮೇಲೆ ಹಾದು ಹೋಗಿದೆ. ಪರಿಣಾಮ ಶಿವಾನಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳಿಕ ಮೃತದೇಹವನ್ನು ವೆನ್ಲಾಕ್‌ಗೆ ಕೊಂಡೊಯ್ದು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಕದ್ರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net