ಪೋಕ್ಸೋ ಪ್ರಕರಣ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

Gavel on desk. Isolated with good copy space. Dramatic lighting.
Gavel on desk. Isolated with good copy space. Dramatic lighting.
Published on

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದ ಆರೋಪ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎ್ಟಿಎಸ್‌ಸಿ-2 ಪೋಕ್ಸೋ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ನ್ಯಾಯಾಲಯ ಅಪರಾಧಿಗೆ 20 ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.


ಸದಾಶಿವ ಶಿಕ್ಷೆಗೊಳಗಾದ ಆರೋಪಿ.


ಪ್ರಕರಣದ ಹಿನ್ನೆಲೆ: ಬಾಲಕಿ ತಾಯಿಯ ಮೊಬೈಲ್‌ಗೆ ಸದಾಶಿವ ಕರೆ ಮಾಡಿ ಬಾಲಕಿ ಜತೆ ಮಾತನಾಡುತ್ತಿದ್ದ, ಮಾತ್ರವಲ್ಲದೆ ೇಸ್‌ಬುಕ್‌ನಲ್ಲೂ ಸಂಪರ್ಕವಿರಿಸಿಕೊಂಡಿದ್ದ. 2022ರ ಅ.9ರಂದು ಬೆಳಗ್ಗೆ 10 ಗಂಟೆಗೆ ಆರೋಪಿ ಬೆಳ್ತಂಗಡಿ ವ್ಯಾಪ್ತಿಯಲ್ಲಿರುವ ಬಾಲಕಿಯ ಮನೆಗೆ ಹೋಗಿ, ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಬಾಲಕಿಯ ಮನೆಯಿಂದ ತೆರಳಿದ ಆರೋಪಿ ೇಸ್‌ಬುಕ್ ಮೂಲಕವೂ ಅಶ್ಲೀಲ ಸಂದೇಶ ಹಾಕುತ್ತಿದ್ದ. 2022 ಅ.10ರಂದು ಮತ್ತೆ ೇಸ್‌ಬುಕ್ ಸಂದೇಶ ಹಾಕಿದ್ದ ಆರೋಪಿ ಬಾಲಕಿ ಬಳಿ ‘ನನ್ನನ್ನು ಕ್ಷಮಿಸು, ಇನ್ನು ನಿನಗೆ ತೊಂದರೆ ಕೊಡಲ್ಲ, ನನ್ನಷ್ಟಕ್ಕೆ ನಾನಿರುವೆ’ ಎಂದು ಹೇಳಿದ್ದಾನೆ. ಇದರಿಂದ ನೊಂದ ಬಾಲಕಿ ಡೀಸೆಲ್ ಸೇವನೆ ಮಾಡಿದ್ದಾಳೆ. ಬಾಲಕಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎ್ಟಿಎಸ್‌ಸಿ-2 ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಮಾನು ಕೆ.ಎಸ್. ತೀರ್ಪು ಪ್ರಕಟಿಸಿದ್ದಾರೆ.


ಪ್ರಕರಣದ ವಿಚಾರಣೆ ಸಂದರ್ಭ 14ಸಾಕ್ಷಿದಾರರನ್ನು ವಿಚಾರಣೆ, 33ದಾಖಲೆಗಳನ್ನು ಗುರುತಿಸಲಾಗಿರುತ್ತದೆ. ಪ್ರಕರಣದ ಸಾಕ್ಷ್ಯ, ದಾಖಲೆಗಳು ಹಾಗೂ ಪೂರಕ ಸಾಕ್ಷ್ಯಧಾರದಲ್ಲಿ ಅಪರಾಧ ಸಾಬೀತಾಗಿದೆ. ಈ ಪ್ರಕರಣದ ಆರೋಪಿ ಸದಾಶಿವನಿಗೆ ಅತ್ಯಾಚಾರ ಅಪರಾಧಕ್ಕೆ ಭಾರತೀಯ ದಂಡ ಸಂಹಿತೆ ಕಲಂ 376(3) ಮತ್ತು 4(2) ಪೊಕ್ಸೊ ಕಾಯಿದೆಯಂತೆ 20ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು 50ಸಾವಿರ ರೂ. ದಂಡ ವಿಧಿಸಿರುತ್ತದೆ. ಭಾರತೀಯ ದಂಡ ಸಂಹಿತೆ ಕಲಂ-354 ಮತ್ತು ಕಲಂ 8 ಪೋಕ್ಸೋ ಕಾಯಿದೆಯಂತೆ 3 ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು 5ಸಾವಿರ ರೂ. ದಂಡ ವಿಧಿಸಿದೆ. ಮಾಹಿತಿ ತಂತ್ರಜ್ಞಾನ ಕಾಯಿದೆ ಕಲಂ 67ರಂತೆ 1ವರ್ಷಗಳ ಕಾಲ ಸಾದಾ ಶಿಕ್ಷೆ ಮತ್ತು 5ಸಾವಿರ ರೂ. ದಂಡ ವಿಧಿಸಲಾಗಿದೆ.


ಬೆಳ್ತಂಗಡಿ ಪೊಲೀಸ್ ಇನ್‌ಸ್ಪೆಕ್ಟರ್ ಶಿವಕುಮಾರ್ ಬಿ. ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ. ಬದರಿನಾಥ ನಾಯರಿ ವಾದ ಮಂಡಿಸಿದರು.ಬಾಲಕಿಗೆ ಪರಿಹಾರ ನಿರ್ದೇಶನ: ದಂಡದ ಹಣವಾದ 50ಸಾವಿರ ರೂ. ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ದಂಡ ಪ್ರಕ್ರಿಯೆ ಸಂಹಿತೆ ಕಲಂ 357(ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆಯಡಿಯಲ್ಲಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 1,50,000ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಧಿಕಾರ ನೀಡುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net