ಕಂಕನಾಡಿ ನಗರ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ನಾಪತ್ತೆ

missing
Published on

ಮಂಗಳೂರು: ಸುಮಾರು 15 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಂಕನಾಡಿ ನಗರ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿದ್ದ ಮಂಜುನಾಥ ಹೆಗ್ಡೆ ಅವರನ್ನು ಮಂಗಳೂರು ನಗರ ಸಿಸಿಆರ್‌ಬಿ ಘಟಕಕ್ಕೆ ನಿಯೋಜಿಸಲಾಗಿತ್ತು. ಅಲ್ಲಿ ಕೆಲಸಕ್ಕೆ ವರದಿ ಮಾಡುವುದಾಗಿ ಹೇಳಿ ಜ.13ರಂದು ಮನೆಯಿಂದ ಹೋಗಿದ್ದರು. ಆ ದಿನ ಮಧ್ಯಾಹ್ನ 1 ಗಂಟೆಗೆ
ಮನೆಮಂದಿ ಮಂಜುನಾಥ್ ಅವರ ಮೊಬೈಲ್‌ಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿತ್ತು. ಸ್ನೇಹಿತರಲ್ಲಿ, ಪರಿಚಯದವರಲ್ಲಿ ಸಂಬಂಧಿಕರಲ್ಲಿ ವಿಚಾರಿಸಿದಾಗ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಪೊಲೀಸ್ ತಂಡ ರಚಿಸಿ ಪತ್ತೆ
ಕಾರ್ಯ ನಡೆಸಲಾಗುತ್ತಿದೆ.


5.6 ಅಡಿ ಎತ್ತರದ, ಗೋಧಿ ಮೈ ಬಣ್ಣದ, ದುಂಡು ಮುಖದ, ಸಪೂರ ಶರೀರದ, ಬಿಳಿ ಹಾಗೂ ಕ್ರೀಂ ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ಮಂಜುನಾಥ್ ಹೆಗ್ಡೆ ಒಂದು ವರ್ಷದ ಹಿಂದೆಯೂ ಇದೇ ರೀತಿ ನಾಪತ್ತೆಯಾಗಿದ್ದರು. ನಂತರ ಪೊಲೀಸರು ಮೈಸೂರಿನಲ್ಲಿ ಅವರನ್ನು ಪತ್ತೆ ಮಾಡಿದ್ದರು. ಒತ್ತಡಕ್ಕೆ ಒಳಗಾದಾಗ ಹೇಳದೆ ಹೋಗುವ ಮನಸ್ಥಿತಿ ಹೊಂದಿದವರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net