ಪಿಎಫ್ಐ, ಎಸ್ಡಿಪಿಐ ಮುಖಂಡರ ಮನೆಗೆ ಪೊಲೀಸ್ ದಾಳಿ, 7 ಮಂದಿ ವಶಕ್ಕೆ

IMG_20221013_100037
Published on

ಮಂಗಳೂರು: ಮಂಗಳೂರಿನಲ್ಲಿ ಪಿಎಫ್ ಐ ಮತ್ತುಎಸ್‌ ಡಿಪಿಐ ಮುಖಂಡರ ಮನೆಗಳಿಗೆ ಪೊಲೀಸರು ಗುರುವಾರ ಬೆಳಗ್ಗೆ ಮತ್ತೆ ದಾಳಿ ನಡೆಸಿದ್ದಾರೆ. ಪಣಂಬೂರು, ಉಳ್ಳಾಲ, ಬಜಪೆ ಠಾಣೆ ವ್ಯಾಪ್ತಿಯ 9 ಕಡೆ ಪೊಲೀಸ್ ದಾಳಿ ನಡೆದಿದ್ದು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬುಬಕ್ಕರ್ ಕುಳಾಯಿ ಮನೆಯಲ್ಲೂ ಪೊಲೀಸರು ಶೋಧ ನಡೆಸಿದ್ದಾರೆ. ವಿಶೇಷ ತಂಡಗಳನ್ನು ರಚಿಸಿ ನಸುಕಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. 7 ಮಂದಿ ಪಿ ಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.

ಸೆ.27ರಂದು ದಾಳಿ ನಡೆಸಿದ್ದ ವೇಳೆ 26 ಮಂದಿಯನ್ನು ವಶಕ್ಕೆ ಪಡೆಯಲು ಪೊಲೀಸರು ಲಿಸ್ಟ್ ಮಾಡಿಕೊಂಡಿದ್ದರು ಎನ್ನಲಾಗಿದೆ. ಆ ಪೈಕಿ 12 ಮಂದಿ ತಪ್ಪಿಸಿಕೊಂಡಿದ್ದು ಅವರಿಗಾಗಿ ಶೋಧ ನಡೆಸಲಾಗಿದೆ. ಪಣಂಬೂರು ಠಾಣೆ ವ್ಯಾಪ್ತಿಯಲ್ಲಿ ಮೊಹಮ್ಮದ್ ರಫೀಕ್, ಮೊಹಮ್ಮದ್ ಬಿಲಾಲ್, ಕಸಬಾ ಬೆಂಗ್ರೆ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ಉಳ್ಳಾಲ ಠಾಣೆ ಪೊಲೀಸರು ಮೊಹಮ್ಮದ್ ರಫೀಕ್, ಅಬ್ಬಾಸ್ ಕಿನ್ಯಾ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ಗ್ರಾಮಾಂತರ ಪೊಲೀಸರು ಅಕ್ಬರ್ ಸಿದ್ದಿಕ್ ನನ್ನು ಅಡ್ಯಾರಿನಿಂದ ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಮೂಲದಿಂದ ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net