ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ರೆಡ್‌ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ ಅವರು ಪ್ರೆಸ್ ಗೌರವ ಸನ್ಮಾನಕ್ಕೆ ಆಯ್ಕೆಯಾದವರನ್ನು ಗೌರವಿಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್.ಕೆ.ಪೂಜಾರಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.