ಮಾ.18ರಂದು ಡಾ.ಆರ್.ಕೆ.ನಾಯರ್ ಪ್ರೆಸ್ ಕ್ಲಬ್ ಗೌರವ ಅತಿಥಿ

mng--15 march R K nayar
Published on

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಾ.18ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಗುಜರಾತ್ ನ ಸ್ಮೃತಿ ವನದ ರೂವಾರಿ, ಪರಿಸರವಾದಿ ಡಾ.ಆರ್.ಕೆ.ನಾಯರ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.

ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಖಾದರ್ ಶಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್.ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net