

ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕ ಮತ್ತು ರೋಟರಿ ಕ್ಲಬ್ ಮಂಗಳೂರು ಪೂರ್ವ ವತಿಯಿಂದ
ಸರ್ಕಾರಿ ಕಿಟ್ಟಲ್ ಮೆಮೋರಿಯಲ್ ಹೈಸ್ಕೂಲ್ ಗೋರಿಗುಡ್ಡ ಇಲ್ಲಿನ ಮಕ್ಕಳಿಗೆ ಸಮವಸ್ತ್ರ ನೀಡಲು ನೆರವು ಒದಗಿಸಲಾಯಿತು.
ನಗರದ ಹೋಟೆಲ್ ಮೋತಿ ಮಹಲ್ ಸಭಾಂಗಣದಲ್ಲಿ ನಡೆದ ರೋಟರಿ ಕ್ಲಬ್ ಮಂಗಳೂರು ಪೂರ್ವದ ಪದಗ್ರಹಣ ಸಮಾರಂಭದಲ್ಲಿ 50 ಸಾವಿರ ರೂ. ಮೊತ್ತದ ಚೆಕ್ ಶಾಲಾ ಮುಖ್ಯ ಶಿಕ್ಷಕಿ ವಜ್ರಕಾಂತಿ ಅವರಿಗೆ ಹಸ್ತಾಂತರಿಸಲಾಯಿತು. ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ, ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ, ರೋಟರಿಯ ಮಾಜಿ ಗವರ್ನರ್ ಪ್ರಕಾಶ್ ಕಾರಂತ್, ಸಹಾಯಕ ಗವರ್ನರ್ ವಿಶ್ವನಾಥ ಶೆಟ್ಟಿ, ರೋಟರಿ ಕ್ಲಬ್ ಮಂಗಳೂರು ಪೂರ್ವದ ನಿರ್ಗಮನ ಅಧ್ಯಕ್ಷ ಜಯರಾಮ ಶೆಟ್ಟಿ, ನೂತನ ಅಧ್ಯಕ್ಷ ಗೋಪಾಲ್ ಶೆಟ್ಟಿ, ಕಾರ್ಯದರ್ಶಿ ರಾಘವೇಂದ್ರ ನೆಲ್ಲಿಕಟ್ಟೆ, ಝೋನಲ್ ಲೆಫ್ಟಿನೆಂಟ್ ಸಿಎ ಹರೀಶ್ ಶೆಟ್ಟಿ ಉಪಸ್ಥಿತರಿದ್ದರು.