ರೋಟರಿ ಸಂಸ್ಥೆಯ ಕಾರ್ಯ ಶ್ಲಾಘನೀಯ ವಂದನಾ ಪ್ರಶಸ್ತಿ ಸ್ವೀಕರಿಸಿ ಉದ್ಯಮಿ ಡಾ.ಕೆ.ಪ್ರಕಾಶ್ ಶೆಟ್ಟಿ

mng---29 march Vandanaa award
Published on

ಮಂಗಳೂರು: ಸಾಧಕರನ್ನು ಗುರುತಿಸಿ, ಪ್ರಶಸ್ತಿ ನೀಡುವ ರೋಟರಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಹೊಟೇಲ್ ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ ಹೇಳಿದರು.

ನಗರದ ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ನಡೆದ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟಾರ‌್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಜಂಟಿ ಆಶ್ರಯದಲ್ಲಿ ಪ್ರಾಯೋಜಿಸಿದ ರಾಜ್ಯಮಟ್ಟದ 22 ನೇ ವಾರ್ಷಿಕ ಮತ್ತು 2025ನೇ ಸಾಲಿನ ಪ್ರತಿಷ್ಠಿತ ವಂದನಾ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ದೇವರ ಅನುಗ್ರಹ, ಗುರುಗಳ ಮಾರ್ಗದರ್ಶನ, ಉಪದೇಶ, ಹಿರಿಯರ ಆಶೀರ್ವಾದ, ಗ್ರಾಹಕರ ವಿಶ್ವಾಸ, ಕುಟುಂಬ, ಮಿತ್ರರ ಸಹಕಾರ, ಪ್ರೋತ್ಸಾಹ ಮತ್ತು ಉದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ವ್ಯವಹಾರ ದಕ್ಷತೆ, ಪ್ರಾಮಾಣಿಕತೆ, ಶ್ರಮ ಕಾರಣ. ಪ್ರಶಸ್ತಿ ಸ್ವೀಕರಿಸಿದ ಬಳಿಕ ಇನ್ನಷ್ಟು ಸಾಧಿಸಲು ಪ್ರೇರಣೆಯಾಗಿದೆ ಎಂದರು.

ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಡಾ. ದೇವದಾಸ್ ರೈ ಮಾತನಾಡಿ, ವಂದನಾ ಪ್ರಶಸ್ತಿಯು ತಮ್ಮ ಸಂಸ್ಥೆಯ ವೃತ್ತಿಪರ ಸೇವೆ ಯೋಜನೆಯ ಅಂಗವಾಗಿದ್ದು, ಈ ವಾರ್ಷಿಕ ಪ್ರಶಸ್ತಿಯನ್ನು ಸಾಧಕರನ್ನು ಗುರುತಿಸಿ ವಿವಿಧ ಕ್ಷೇತ್ರದಲ್ಲಿ ಸಾಧಿಸಿದ ಸಾಧನೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ ಎಂದರು.

ರೋಟರ‌್ಯಾಕ್ಟ್ ಸಂಸ್ಥೆಯ ಅಧ್ಯಕ್ಷ ಬಿದ್ದಪ್ಪ ಪ್ರಶಸ್ತಿ ವಿಜೇತರ ಪರಿಚಯ ಮತ್ತು ಸಾಧನೆಗಳ ಮಾಹಿತಿ ನೀಡಿದರು. ಸಹಾಯಕ ಗವರ್ನರ್ ಕೆ.ಎಂ. ಹೆಗ್ಡೆ ಅಭಿನಂದನಾ ಭಾಷಣ ಮಾಡಿದರು.

ರೋಟರ‌್ಯಾಕ್ಟ್ ಸಂಸ್ಥೆಯ ಜಿಲ್ಲಾ ಪ್ರತಿನಿಧಿ ಸಂಜಯ್ ಸಂಸ್ಥೆಯ ಸಾಪ್ತಾಹಿಕ ಗೃಹ ವಾರ್ತಾ ಪತ್ರಿಕೆ ಸೆಂಟೊರ್ ಬಿಡುಗಡೆಗೊಳಿಸಿದರು. ರೋಟರಿ ಮಂಗಳೂರು ಸೆಂಟ್ರಲ್‌ನ ಅಧ್ಯಕ್ಷ ಬ್ರೀಯಾನ್ ಪಿಂಟೋ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸುಧೀರ್ ಶೆಟ್ಟಿ ಅವರನ್ನು ಸಂಸ್ಥೆಗೆ ನೂತನ ಸದಸ್ಯರಾಗಿ ಸೇರ್ಪಡಿಸಲಾಯಿತು.

ಕಾರ್ಯದರ್ಶಿ ರಾಜೇಶ್ ಸಿತಾರಾಮ್ ವರದಿ ಮಂಡಿಸಿದರು. ಸಂಸ್ಥೆಯ ಮಾಜಿ ಅಧ್ಯಕ್ಷ ರಾಜೇಶ್ ಶೆಟ್ಟಿ, ಚುನಾಯಿತ ಅಧ್ಯಕ್ಷ ಭಾಸ್ಕರ್ ರೈ ಉಪಸ್ಥಿತರಿದ್ದರು. ರೋಟಾರ‌್ಯಕ್ಟ್ ಸಂಸ್ಥೆಯ ಕಾರ್ಯದರ್ಶಿ ಅಕ್ಷಯ್ ರೈ ವಂದಿಸಿದರು. ಲೆಕ್ಕ ಪರಿಶೋಧಕ ನಿತಿನ್ ಶೆಟ್ಟಿ ಕಾರ್ಯಕ್ರಮ ಪ್ರಾಯೋಜಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net