

ಮಂಗಳೂರು: ನಾರಾಯಣಗುರು ಯುವ ವೇದಿಕೆಯ ರಜತ ಸಂಭ್ರಮ ಸಲುವಾಗಿ ಪುರಭವನದಲ್ಲಿ ಬ್ರಹ್ಮಶ್ರೀ ಬಂಗಾರದ ಪದಕ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ, ಸಾಧನಾಶೀಲರಿಗೆ ಸನ್ಮಾನ ಕಾರ್ಯಕ್ರಮವು ಜರುಗಿತು.
ನಾರಾಯಣ ಗುರು ಯುವ ವೇದಿಕೆ ಅಧ್ಯಕ್ಷ ಸುದರ್ಶನ್ ಕೊಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ರವರನ್ನು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರು ಗೌರವಿಸಿದರು.
ಶಾಸಕ ವೇದವ್ಯಾಸ್ ಕಾಮತ್, ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ನಮ್ಮ ಕುಡ್ಲ ಸಂಸ್ಥೆಯ ಮುಖ್ಯಸ್ಥ ಲೀಲಾಕ್ಷ ಕರ್ಕೆರಾ, ಡೀನೆಟ್ ಮೆನೇಜಿಂಗ್ ಡೈರೆಕ್ಟರ್ ಸಂದೇಶ್ ಪೂಜಾರಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆೆ ಟಿ. ಸುವರ್ಣ, ಶಿಕ್ಷಣ ತಜ್ಞೆ ಶಶಿಲೇಖ, ಪೋಲೀಸ್ ಅಧಿಕಾರಿ ಹರೀಶ್ ಪದವಿನಂಗಡಿ, ಹೋಮಿಯೋಪತಿ ವೈದ್ಯ ಡಾ. ಶಿವಪ್ರಸಾದ್, ಶಿರ್ಡಿಬಾಬ ರಿಯಲ್ ಎಸ್ಟೇಟ್ ಮಾಲೀಕ ರತೀಂದ್ರ ನಾಥ್, ಸಂಚಾಲಕರಾದ ಸುಧಾಕರ್ ಕರ್ಕೇರ, ಎಮ್. ಎಸ್ ಕೋಟ್ಯಾನ್ ಮತ್ತಿತ್ತರರು ಉಪಸ್ಥಿತರಿದ್ದರು.
ನಾರಾಯಣಗುರು ಯುವ ವೇದಿಕೆಯ ಸಹನಿರ್ದೇಶಕ ನೀಲಯ್ಯ ಅಗರಿ ಸ್ವಾಗತಿಸಿದರು. ಸುಮಂತ್ ಸುವರ್ಣ ವಂದಿಸಿದರು. ದಿನೇಶ್ ಸುವರ್ಣ ರಾಯಿ ನಿರೂಪಿಸಿದರು.