ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘ ಧನಲಕ್ಷ್ಮೀ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

mng--23 Oct Hindu jathre
Published on

ಮಂಗಳೂರು: ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘ ದ.ಕ. ಜಿಲ್ಲೆ ವತಿಯಿಂದ ಸಾರ್ವಜನಿಕ ಧನಲಕ್ಷ್ಮೀ ಪೂಜೆ ನ.3ರಂದು ಬೆಳಗ್ಗೆ 9ಕ್ಕೆ ಬಿ.ಸಿ. ರೋಡಿನ ರಕ್ತೇಶ್ವರೀ ದೇವಸ್ಥಾನದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಪತ್ರಿಕಾ ಭವನದಲ್ಲಿ ಬುಧವಾರ ಬಿಡುಗಡೆ ಮಾಡಲಾಯಿತು.

ಈ ಸಂದರ್ಭ ಮಾತನಾಡಿದ ಸಂಘದ ಗೌರವಾಧ್ಯಕ್ಷ ರವೀಂದ್ರ ದಾಸ್ 9ರಂದು ಬೆಳಗ್ಗೆ 8.30ಕ್ಕೆ ಕುಣಿತ ಭಜನೆ, 9 ಗಂಟೆಗೆ ಸಾರ್ವಜನಿಕ ಧನಲಕ್ಷ್ಮೀ ಪೂಜೆ ಪ್ರಾರಂಭ, 11 ಗಂಟೆಗೆ ಮಹಾಪೂಜೆ, 11.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ನ ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅಶೀರ್ವಚನ ನೀಡಲಿದ್ದಾರೆ.

ಶಾಸಕ ರಾಜೇಶ್ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ವಿಹಿಂಪದ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹನಾಯಕ್, ಶಾಸಕಿ ಭಾಗೀರಥಿ ಮುರುಳ್ಯ, ಮೇಯರ್ ಮನೋಜ್ ಕುಮಾರ್, ವಿಹಿಂಪ ಜಿಲ್ಲಾಧ್ಯಕ್ಷ ಪುರುಷೋತ್ತಮ ಮಂಗಳೂರು, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭ ಜಯರಾಮ್ ಶೆಟ್ಟಿಗಾರ್, ದಿನೇಶ್ ಅಮ್ಟೂರ್, ಪ್ರಾಣೇಶ್ ರಾವ್, ಧನಂಜಯ್, ಪ್ರಕಾಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net