ಮಂಗಳೂರು: ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಗುರುವಾರ ಜಂಟಿ ದಾಳಿ ನಡೆಸಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.
ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ.
ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಸೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಇದ್ದರು.