ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿಯೇ ಸಂಸ್ಕಾರ ಪಡೆಯಬೇಕು.ಕೃಷ್ಣಮಯ 2024 ಉದ್ಘಾಟಿಸಿ ಚಂದ್ರಶೇಖರ ಶೆಟ್ಟಿ ಹೇಳಿಕೆ

mng--21 Aug shakthi krishnamaya
Published on

ಮಂಗಳೂರು : ನಮ್ಮ ಬಾಲ್ಯದಲ್ಲಿಯೇ ಉತ್ತಮ ಸಂಸ್ಕಾರಗಳನ್ನು ಕಲಿತಾಗ ನಮ್ಮನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ ಎಂದು ಸನಾತನ ನಾಟ್ಯಾಲಯ ಮಂಗಳೂರಿನ ನಿರ್ದೇಶಕ ಚಂದ್ರಶೇಖರ ಶೆಟ್ಟಿ ಹೇಳಿದರು.


ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜು ಹಾಗೂ ಶ್ರೀಗೋಪಾಲಕೃಷ್ಣ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣಮಯ 2024 ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು.


ನಮ್ಮ ತಂದೆ ತಾಯಿಗೆ ಗೌರವವನ್ನು ಕೊಡುವುದು, ಅನ್ನವನ್ನು ತಟ್ಟೆಯಲ್ಲಿ ಉಳಿಸದೆ ಪೂರ್ಣ ಊಟ ಮಾಡುವುದು ಸೇರಿದಂತೆ ಹಲವು ವಿಷಯಗಳ ಕುರಿತು ವಿದ್ಯಾರ್ಥಿ ಜೀವನದಲ್ಲಿಯೇ ಸಂಸ್ಕಾರವನ್ನು ಪಡೆಯಬೇಕು ಎಂದು ಹೇಳಿದರು.


ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ ಮಾತನಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಮಕ್ಕಳಿಗೆ ಶ್ರೀಕೃಷ್ಣ ವೇಷವನ್ನು ಹಾಕಿ ಸ್ಪರ್ಧೆಗೆ ಬಂದಿರುವ ಮುದ್ದುಮಕ್ಕಳು ಅಭಿನಂದನೀಯರು. ಇವರನ್ನು ಮನೆಯಲ್ಲಿ ಒಳ್ಳೆಯ ರೀತಿಯಲ್ಲಿ ಬೆಳೆಸಿದಾಗ ಇವರು ದೇಶಕ್ಕೆ ಉತ್ತಮ ಪ್ರಜೆಯಾಗುತ್ತಾರೆ ಎಂದರು.
ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ ಮತ್ತು ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಸಂಯೋಜಕಿ ಪೆಟ್ರಿಷಿಯಾ ಪಿಂಟೊ ಉಪಸ್ಥಿತರಿದ್ದರು. ಶರಣಪ್ಪ ಸ್ವಾಗತಿಸಿದರು. ಭವ್ಯಶ್ರೀ ವಂದಿಸಿದರು. ಚಿತ್ರಕಲಾ ಶಿಕ್ಷಕ ಪೂರ್ಣೇಶ್ ಕಾರ್ಯಕ್ರಮದ ಸಂಯೋಜಿಸಿದ್ದರು. ಈ ಸಂದರ್ಭದಲ್ಲಿ ಅನೇಕ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ. ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ನಗದು ಮತ್ತು ಫಲಕವನ್ನು ನೀಡಿ ಗೌರವಿಸಲಾಯಿತು. ಒಟ್ಟು 15 ಶಾಲೆಗಳ 150 ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಸ್ಪರ್ದೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net