ಮಂಗಳೂರು ಶ್ರೀ ಶಾರದಾ ಮಹೋತ್ಸವ ಆರಂಭ

mng-9oct-venkataraman sharade
ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವದ ಅಂಗವಾಗಿ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ ನೆರವೇರಿತು.
Published on

ಮಂಗಳೂರು: ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವದ ಅಂಗವಾಗಿ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆ ಬುಧವಾರ ನೆರವೇರಿತು.

ಅ.10ರಂದು ರಾತ್ರಿ 8ಕ್ಕೆ ದುರ್ಗಾ ನಮಸ್ಕಾರ ಸೇವೆ, ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ, 13ರಂದು ದೀಪಾಂಲಕಾರ ಸಹಿತ ರಂಗಪೂಜೆ ಬೆಳಗ್ಗೆ 10ಕ್ಕೆ ವಿದ್ಯಾರಂಭ, ಸಾಯಂಕಾಲ 6ಕ್ಕೆ ವಿಶೇಷ ದೀಪಾಲಂಕಾರ ಸೇವೆ , 14ರಂದು ಸಾಯಂಕಾಲ 5ಕ್ಕೆ ಶಾರದಾ ಮಾತೆಗೆ ಪೂರ್ಣಾಲಂಕಾರ, ರಾತ್ರಿ 8ಕ್ಕೆ ಚಿತ್ರಾಪುರ ಮಠದ ಶ್ರೀ ಶಂಕರಾಶ್ರಮ ಸ್ವಾಮೀಜಿ ಉಪಸ್ಥಿತಿಯಲ್ಲಿ ಶ್ರೀ ಶಾರದಾ ಮಾತೆಯ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಅ.13ವರೆಗೆ ಪ್ರತೀದಿನ ರಾತ್ರಿ 7ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಪ್ರತೀ ದಿನ ಬೆಳಗ್ಗೆ 10ರಿಂದ ರಾತ್ರಿ 10ರವರೆಗೆ ಶ್ರೀ ಶಾರದಾ ಮಾತೆಯ ದರ್ಶನ ಪಡೆಯಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net