ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಚಿವರ ಸೂಚನೆ

IMG-20220201-WA0001
Published on

ಮಂಗಳೂರು: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ಬೆಳಗ್ಗೆ ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ವೀಕ್ಷಿಸಿದರು.

ಕಾಮಗಾರಿಗಳು ವಿಳಂಬವಾಗುತ್ತಿರುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಅದಕ್ಕಾಗಿ ಶೀಘ್ರ ಮುಗಿಸಲು ಅಧಿಕಾರಿಗಳು ಗಮನ ನೀಡಬೇಕು ಎಂದರು.

ಮೇಯರ್ ಪ್ರೇಮಾನಂದ ಶೆಟ್ಟಿ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್, ಸ್ಮಾರ್ಟ್ ಸಿಟಿ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net