

ಮಂಗಳೂರು: ಬಸ್ ಹತ್ತುವ ವೇಳೆ ಕಾಲು ಜಾರಿ ಬಿದ್ದ ವಿದ್ಯಾರ್ಥಿನಿ ಬಸ್ಸಿನಡಿ ಬೀಳುವುದರಿಂದ ಸ್ವಲ್ಪದರಲ್ಲೆ ಪಾರಾಗಿರುವ ಘಟನೆ ಮೂಡಬಿದಿರೆ ತಾಲೂಕಿನ ವಿದ್ಯಾಗಿರಿ ಎಂಬಲ್ಲಿ ನಡೆದಿದೆ.
ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕು ವಿದ್ಯಾಗಿರಿಯಲ್ಲಿ ಕಾಲೇಜು ಮುಗಿಸಿ ವಿದ್ಯಾರ್ಥಿನಿ ಖಾಸಗಿ ಬಸ್ ನಲ್ಲಿ ಮನೆಗೆ ತೆರಳುವಾಗ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಬಸ್ ಹತ್ತುವ ಮೊದಲೇ ಚಾಲಕ ಬಸ್ ಚಲಾಯಿಸಿದ ಪರಿಣಾಮ, ವಿದ್ಯಾರ್ಥಿನಿ ಆಯತಪ್ಪಿ ಬಸ್ಸಿನಿಂದ ಕೆಳಗೆ ಬಿದ್ದಿದ್ದಾಳೆ.
ಅದೃಷ್ಟವಶಾತ್ ವಿದ್ಯಾರ್ಥಿನಿ ಬಸ್ಸಿನ ಚಕ್ರದಡಿಗೆ ಬೀಳುವುದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾಳೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.