ವಿದ್ಯಾರ್ಥಿಗಳನ್ನು ಅಪಹರಿಸಿ ಅಮಾನುಷ ಹಲ್ಲೆ ಮೂವರ ಬಂಧನ

arrested
Published on

ಮಂಗಳೂರು: ವಿದ್ಯಾರ್ಥಿಗಳನ್ನು ಅಪಹರಿಸಿ ಅಮಾನುಷವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಗರದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.


ಅಫ್ನಾನ್, ದಿಯಾನ್ ಮತ್ತು ಸಲ್ಮಾನ್ ಬಂಧಿತ ವಿದ್ಯಾರ್ಥಿಗಳು. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.


ಫುಟ್ಬಾಲ್ ಪಂದ್ಯಾಟದ ಬಳಿಕ ಉಂಟಾದ ಗಲಾಟೆಯ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ತಂಡವೊಂದು ಮೂವರು ವಿದ್ಯಾರ್ಥಿಗಳನ್ನು ಅಪಹರಿಸಿ ವಿವಸ್ತ್ರಗೊಳಿಸಿ ಅಮಾನುಷವಾಗಿ ಹಲ್ಲೆಗೈದು ಅದರ ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿತ್ತು. ಈ ಹಿನ್ನೆಲೆಯಲ್ಲಿ ಪಾಂಡೇಶ್ವರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net