ಸುರತ್ಕಲ್ ಎನ್‌ಐಟಿಕೆ ಉಪ ನಿರ್ದೇಶಕರಾಗಿ ಡಾ.ಸುಭಾಷ್ ಸಿ.ಯರಗಲ್ ನೇಮಕ

mng--19 Sep Dr. subash yaragal
Published on

ಮಂಗಳೂರು: ಸುರತ್ಕಲ್ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‌ಐಟಿಕೆ)ದ ಉಪ ನಿರ್ದೇಶಕರಾಗಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ.ಸುಭಾಷ್ ಸಿ.ಯರಗಲ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.


ಸುರತ್ಕಲ್ ಎನ್‌ಐಟಿಕೆಗೆ 1996 ರಲ್ಲಿ ಸೇರಿದ ಡಾ.ಯರಗಲ್ ಅವರು ಸಂಸ್ಥೆಯ ಬೆಳವಣಿಗೆ ಮತ್ತು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಆಡಳಿತ ಮಂಡಳಿಯ ಸದಸ್ಯ, ಡೀನ್ (ಯೋಜನೆ ಮತ್ತು ಅಭಿವೃದ್ಧಿ) ಮತ್ತು ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಸೇರಿದಂತೆ ಹಲವಾರು ಪ್ರಮುಖ ಆಡಳಿತಾತ್ಮಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ.


ಅವರು 1987 ರಲ್ಲಿ ಸುರತ್ಕಲ್ನ ಎನ್‌ಟಿಕೆಯಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದರು. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ನಿಂದ ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಪದವಿಗಳನ್ನು ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net