ವಾಣಿಜ್ಯ ವಾಹನಗಳಿಗೆ ಜಿ.ಪಿ.ಎಸ್. ಮತ್ತು ಪ್ಯಾನಿಕ್ ಬಟನ್ ಆದೇಶ ರದ್ದತಿಗೆ ಒತ್ತಾಯ

mng---22 sep TAXI
Published on


ಮಂಗಳೂರು: ಅಸ್ತಿತ್ವದಲ್ಲಿರುವ ವಾಣಿಜ್ಯ ವಾಹನಗಳಿಗೆ ಜಿ.ಪಿ.ಎಸ್. ಮತ್ತು ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆಯ ಆದೇಶವನ್ನು ರದ್ದುಗೊಳಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರನ್ನು ಟ್ಯಾಕ್ಸಿ ಮೆನ್ಸ್ ಆ್ಯಂಡ್ ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ನಿಯೋಗ ಭೇಟಿ ಮಾಡಿ ಒತ್ತಾಯಿಸಿದೆ.


ಅವೈಜ್ಞಾನಿಕ ಸಾಧನ ಅಳವಡಿಸಲು ನೀಡಿರುವ ಆದೇಶ ಗೊಂದಲವಾಗಿದ್ದು, ವಾಣಿಜ್ಯ ವಾಹನ ಹಾಗೂ ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕ ಮಾಲೀಕರಿಗೆ ಹೆಚ್ಚುವರಿ ಹೊರೆಯಾಗಿದೆ. ಇದರ ವಿರುದ್ಧ ಹೋರಾಟ ನಡೆದಾಗ ತಾತ್ಕಾಲಿಕವಾಗಿ ಒಂದು ತಿಂಗಳ ಮಟ್ಟಿಗೆ ಮುಂದೂಡಿ ಮತ್ತೆ ಆದೇಶ ಜಾರಿಗೆ ತಂದಿದ್ದಾರೆ. ಈ ಆದೇಶವನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.


ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಆ್ಯಂಡ್ ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಅಧ್ಯಕ್ಷ ರಘುಪತಿ ಭಟ್ ನೇತೃತ್ವದಲ್ಲಿ ಸಾರಿಗೆ ಆಯುಕ್ತರನ್ನು ಭೇಟಿ ಮಾಡಿದ ನಿಯೋಗದಲ್ಲಿ ದ.ಕ. ಜಿಲ್ಲಾ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಆ್ಯಂಡ್ ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಅಧ್ಯಕ್ಷ ಆನಂದ ಕೆ., ರಾಜ್ಯ ಟ್ರಾವೆಲ್ಸ್ ಓನರ್ಸ್‌ ಅಸೋಸಿಯೇಶನ್ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ, ಬೆಂಗಳೂರು ಟ್ಯಾಕ್ಸ್‌ಮೆನ್ಸ್ ಅಧ್ಯಕ್ಷ ಶಿವಣ್ಣ ಹಾಗೂ ರಾಜ್ ಕುಮಾರ್, ಉಡುಪಿ ಜಿಲ್ಲಾ ಪ್ರ.ಕಾರ್ಯದರ್ಶಿ ರಮೇಶ್ ಕೆ.ಕೋಟ್ಯಾನ್, ಪದಾಧಿಕಾರಿಗಳಾದ ಪ್ರಕಾಶ್ ಅಡಿಗ, ಕೃಷ್ಣ ಕೋಟ್ಯಾನ್, ಬಿ.ವಿಕ್ರಮ್ ರಾವ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net