ಮಂಗಳೂರು ಟೆಕ್ನೋವಾಂಝಾ ಸಮಾವೇಶ

mng-oct29-ocean pearl
Published on

ಮಂಗಳೂರು: ಕರ್ನಾಟಕ ಡಿಜಿಟಲ್ ಇಕಾನಮಿ ಮಿಷನ್ ವತಿಯಿಂದ ನಗರದ ಓಷಿಯನ್ ಪರ್ಲ್ ಸಭಾಂಗಣದಲ್ಲಿ ಮಂಗಳೂರು ಟೆಕ್ನೋವಾಂಝಾ ಸಮಾವೇಶ ಶುಕ್ರವಾರ ಜರುಗಿತು.
ಉನ್ನತ ಶಿಕ್ಷಣ, ಐಟಿ ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಉದ್ಘಾಟಿಸಿದರು. ಮಂಗಳೂರಿನಲ್ಲಿ ಹೆಚ್ಚಿನ ಸ್ಟಾರ್ಟ್ ಅಪ್ ಆರಂಭಿಸಲು ಸಹಕಾರ ನೀಡಲಾಗುವುದು. ಬ್ಯಾಂಕಿಂಗ್ ಕ್ಷೇತ್ರದ ತವರೂರಾಗಿರುವ ಮಂಗಳೂರಿನಲ್ಲಿ ಫಿನ್‌ಟೆಕ್ ಸೆಂಟರ್ ಆಫ್ ಎಕ್ಸ್‌ಲೆನ್ಸ್ ಮಾಡಲು ಉದ್ದೇಶಿಸಲಾಗಿದ್ದು, 12 ಕೋಟಿ ರೂ. ಮೊತ್ತವನ್ನು ಮುಂದಿನ ಬಜೆಟ್‌ನಲ್ಲಿ ಮೀಸಲಿರಿಸಲಾಗುವುದು. ಕಂಪನಿಗಳನ್ನು ಆಕರ್ಷಿಸಲು ಪ್ರೋತ್ಸಾಹಧನ ನೀಡಲು ಉದ್ದೇಶಿಸಲಾಗಿದೆ ಎಂದರು.
ದಿಕ್ಸೂಚಿ ಭಾಷಣ ಮಾಡಿದ ಟಿ.ವಿ. ಮೋಹನ್‌ದಾಸ್ ಪೈ, ಮಂಗಳೂರಿನಲ್ಲಿ ತಂತ್ರತ್ಞಾನ ಕ್ಷೇತ್ರದ ಬೆಳವಣಿಗೆ ನಿಟ್ಟಿನಲ್ಲಿ ಸ್ಥಳೀಯವಾಗಿ ನೇತೃತ್ವ ವಹಿಸುವವರ ಅಗತ್ಯವಿದೆ ಎಂದರು.
ಮಾಹಿತಿ ತಂತ್ರಜ್ಞಾನ ವಿಷನ್ ಗ್ರೂಪ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ಐಟಿ ಬಿಟಿ ಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಕರ್ನಾಟಕ ಡಿಜಿಟಲ್ ಇಕಾನಮಿ ಮಿಷನ್ ಅಧ್ಯಕ್ಷ ಬಿ.ವಿ.ನಾಯ್ಡು, ಕೌಶಲಾಭಿವೃದ್ಧಿ ಸಚಿವಾಲಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವ ಕುಮಾರ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net