

ಮಂಗಳೂರು: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಣ್ಣೀರುಬಾವಿ ಬೀಚ್ ಬಳಿ ಶನಿವಾರ ರಾತ್ರಿ ನಡೆದಿದೆ.
ಗಾಯಗೊಂಡವರನ್ನು ಬೆಂಗರೆ ನಿವಾಸಿ ಮೊಯ್ದಿನ್ ನಾಝಿಮ್ ಮತ್ತು ಅವರ ಸ್ನೇಹಿತ ಸಾಲೆತ್ತೂರು ನಿವಾಸಿ ಅನಸ್ ಎಂದು ತಿಳಿದು ಬಂದಿದೆ.
ಗಂಭೀರ ಗಾಯಗೊಂಡಿರುವ ಇವರಿಬ್ಬರನ್ನು ನಗರದ ಎರಡು ಪ್ರತ್ಯೇಕ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಮೀಲಾದುನ್ನಬಿ ಪ್ರಯುಕ್ತ ಶನಿವಾರ ಬೆಂಗರೆ ಮಸೀದಿ ವಠಾರದಲ್ಲಿ ಮದ್ರಸ ಮಕ್ಕಳ ಪ್ರತಿಭೋತ್ಸವ ಕಾರ್ಯಕ್ರಮವಿತ್ತು. ಈ ಹಿನ್ನೆಲೆಯಲ್ಲಿ ಸಾಲೆತ್ತೂರು ನಿವಾಸಿ ಅನಸ್ ತನ್ನ ಸ್ನೇಹಿತನಾದ ಬೆಂಗರೆಯ ಮೊಯ್ದಿನ್ ನಾಝಿಮ್ ಅವರ ಮನೆಗೆ ಬಂದು ಬಳಿಕ ಮದ್ರಸ ಕಾರ್ಯಯಕ್ರಮದಲ್ಲಿ ಭಾಗಿಯಾಗಿದ್ದರು. ಸಂಜೆ 7.30ರ ವೇಳೆಗೆ ನಾಝಿಮ್ ಅವರು ಸಾಲೆತ್ತೂರಿಗೆ ತೆರಳುವ ಸ್ನೇಹಿತನನ್ನು ಕೂಳೂರು ಬಸ್ ನಿಲ್ದಾಣಕ್ಕೆ ಬಿಡಲು ಬೈಕ್‌ನಲ್ಲಿ ತಣ್ಣೀರುಬಾವಿ ಬೀಚ್ ರಸ್ತೆಯಲ್ಲಿ ಬರುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿಯಾಗಿ ಪರಾರಿಯಾಗಿದೆ. ಈ ಬಗ್ಗೆ ಸಂಚಾರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.