

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನಾಚರಣೆ ಸೆ. 25ರಂದು ಬೆಳಗ್ಗೆ 11ಕ್ಕೆ ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡುವ ಸಲುವಾಗಿ 1980ರ ಸೆ. 10ರಂದು ಮಂಗಳೂರು ವಿಶ್ವವಿದ್ಯಾನಿಲಯ ಸ್ಥಾಪನೆಗೊಂಡಿದ್ದು, ಇದು 45ನೆ ಸಂಸ್ಥಾಪನಾ ದಿನಾಚರಣೆಯಾಗಿದೆ .ಮಾಜಿ ಲೋಕಾಯುಕ್ತ ಜಸ್ಟಿಸ್ ಎನ್. ಸಂತೋಷ್ ಹೆಗ್ಡೆ ಸಂಸ್ಥಾಪನಾ ಉಪನ್ಯಾಸ ನೀಡಲಿದ್ದಾರೆ ಎಂದು ಮಂಗಳೂರು ವಿ.ವಿ. ಕುಲಪತಿ ಪ್ರೊ.ಪಿ.ಎಲ್. ಧರ್ಮ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಂಗಳೂರು ವಿ.ವಿಯ ರಿಜಿಸ್ಟ್ರಾರ್ ಪ್ರೊ.ದೇವೇಂದ್ರಪ್ಪ, ಕಾರ್ಯಕ್ರಮ ಸಂಯೋಜಕ ಪ್ರೊ. ಎ.ಎಂ. ಖಾನ್, ಸಂಗಪ್ಪ, ಪ್ರೊ. ಪುಟ್ಟಣ್ಣ ಉಪಸ್ಥಿತರಿದ್ದರು.