ಯೋಗದಿಂದ ಮಾನಸಿಕ- ಶಾರೀರಿಕ ಆರೋಗ್ಯ- ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಡಾ.ಅನಸೂಯ ರೈ ಕಿವಿಮಾತು

mng- aug 29- university college
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಬುಧವಾರ ಸ್ನಾತಕೋತ್ತರ ಯೋಗ ವಿಜ್ಞಾನ ವಿಭಾಗದ ವತಿಯಿಂದ ಸ್ನಾತಕೋತ್ತರ ಯೋಗ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ ವಿದ್ಯಾರ್ಥಿಗಳಿಗೆ ಬೀಳ್ಕೊಡಲಾಯಿತ್ತು. ಉಪನ್ಯಾಸಕರೊಂದಿಗೆ ವಿದ್ಯಾರ್ಥಿಗಳು
Published on

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಬುಧವಾರ ಸ್ನಾತಕೋತ್ತರ ಯೋಗ ವಿಜ್ಞಾನ ವಿಭಾಗದ ವತಿಯಿಂದ ಸ್ನಾತಕೋತ್ತರ ಯೋಗ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ, ದೈಹಿಕ ಮತ್ತು ಮಾನಸಿಕ ಆರೋಗ್ಯದ ಉನ್ನತಿಗೆ ಯೋಗ ಬಹಳ ಮುಖ್ಯ. ಪ್ರತಿದಿನವೂ ಯೋಗಾಭ್ಯಾಸ ಮಾಡಬೇಕು. ಯೋಗದಿಂದ ಮಾನಸಿಕ ಮತ್ತು ಶಾರೀರಿಕ ಆರೋಗ್ಯದ ವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ವಿಭಾಗದಲ್ಲಿ ಯೋಗ ಕಲಿತ ಎಲ್ಲರ ಬದುಕು ಸುಖಕರವಾಗಿರಲಿ ಎಂದು ಹಾರೈಸಿದರು.
ಪ್ರಸ್ತಾವನೆಗೈದ ಸ್ನಾತಕೋತ್ತರ ಯೋಗ ವಿಜ್ಞಾನ ಮತ್ತು ಕ್ರೀಡಾ ವಿಭಾಗದ ಸಂಯೋಜಕ ಡಾ. ಕೇಶವಮೂರ್ತಿ, ಯೋಗ ಮತ್ತು ಕ್ರೀಡೆ ಇವೆರಡಕ್ಕೂ ಬಹಳಷ್ಟು ಅಂತರವಿದೆ. ಸ್ಪರ್ಧೆಗಳಿಗಾಗಿ ಯೋಗಾಭ್ಯಾಸ ಮಾಡುವುದರ ಬದಲು ಸುಖಕರ ಜೀವನಕ್ಕಾಗಿ ಯೋಗಾಭ್ಯಾಸ ಮಾಡಬೇಕು. ಏನನ್ನು ಕಲಿತ್ತಿರುವಿರೋ ಅದನ್ನು ತಮ್ಮ ಮುಂದಿನ ಬದುಕಿನಲ್ಲಿಯೂ ಅಳವಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಸ್ನಾತಕೋತ್ತರ ಯೋಗ ವಿಭಾಗದ ಉಪನ್ಯಾಸಕರಾದ ಡಾ.ಅಜಿತೇಶ್, ಡಾ.ರಂಗಪ್ಪ, ಉಮನಾಥ್, ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಬುಧವಾರ ಸ್ನಾತಕೋತ್ತರ ಯೋಗ ವಿಜ್ಞಾನ ವಿಭಾಗದ ವತಿಯಿಂದ ಸ್ನಾತಕೋತ್ತರ ಯೋಗ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ ವಿದ್ಯಾರ್ಥಿಗಳಿಗೆ ಬೀಳ್ಕೊಡಲಾಯಿತ್ತು. ಉಪನ್ಯಾಸಕರೊಂದಿಗೆ ವಿದ್ಯಾರ್ಥಿಗಳು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net