ಮಾತೃಭಾಷೆಯ ಜೊತೆಗೆ ಹಿಂದಿ ಭಾಷೆಯ ಅಧ್ಯಯನ ಅನುಕೂಲ- ‘ಗ್ರಂಥಾವಲೋಕನ’ದಲ್ಲಿ ಡಾ.ಅನಸೂಯ ರೈ ಸಲಹೆ

mng- sep 14- University Library 2
ಮಂಗಳೂರು ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಂದಿ ದಿನಾಚರಣೆ ಅಂಗವಾಗಿ ಗುರುವಾರ ‘ಗ್ರಂಥಾವಲೋಕನ’- ಪುಸ್ತಕ ಪ್ರದರ್ಶನ ಮತ್ತು ಪುಸ್ತಕ ವಿಮರ್ಶೆ ಕಾರ್ಯಕ್ರಮ ಆಚರಿಸಲಾಯಿತು. ಪ್ರಾಂಶುಪಾಲೆ ಡಾ. ಅನಸೂಯ ರೈ, ಐಕ್ಯೂಎಸಿ ಸಂಯೋಜಕ ಡಾ.ಸಿದ್ದರಾಜು ಎಂ. ಎನ್., ಹಿಂದಿ ವಿಭಾಗದ ಮುಖ್ಯಸ್ಥೆ ಡಾ.ಸುಮಾ ಟಿ. ಆರ್.,ಗ್ರಂಥಪಾಲಕಿ ಡಾ. ವನಜ ಉಪಸ್ಥಿತರಿದ್ದರು.
Published on

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಂದಿ ವಿಭಾಗ, ಆಂತರಿಕ ಗುಣಮಟ್ಟ ಖಾತರಿಕೋಶ (ಐಕ್ಯೂಎಸಿ) ಮತ್ತು ಕಾಲೇಜಿನ ಗ್ರಂಥಾಲಯದ ವತಿಯಿಂದ ಗುರುವಾರ ಹಿಂದಿ ದಿನಾಚರಣೆ ಅಂಗವಾಗಿ ‘ಗ್ರಂಥಾವಲೋಕನ’- ಪುಸ್ತಕ ಪ್ರದರ್ಶನ ಮತ್ತು ಪುಸ್ತಕ ವಿಮರ್ಶೆ ಕಾರ್ಯಕ್ರಮ ಆಚರಿಸಲಾಯಿತು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲೆ ಡಾ. ಅನಸೂಯ ರೈ, ಹಿಂದಿ ಭಾಷೆಗೆ ದೇಶದಲ್ಲಿ ಅತ್ಯುನ್ನತ ಸ್ಥಾನವಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲೂ ಹಿಂದಿ ಭಾಷಿಗರ ಸಂಖ್ಯೆ ದೊಡ್ಡದಿದೆ. ಹಾಗಾಗಿ ಮಾತೃಭಾಷೆಯ ಜೊತೆಗೆ ಹಿಂದಿ ಭಾಷೆಯ ಅಧ್ಯಯನ ಮಾಡಿದರೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಿದೆ ಎಂದು ಹೇಳಿದರು.


ಐಕ್ಯೂಎಸಿ ಸಂಯೋಜಕ ಡಾ.ಸಿದ್ದರಾಜು ಎಂ.ಎನ್. ಮಾತನಾಡಿ, ದೇಶದ ಇತಿಹಾಸ, ವಿಶೇಷವಾಗಿ ಭಾರತದ ಸ್ವಾತಂತ್ರ್ಯಪೂರ್ವ ಇತಿಹಾಸದ ಬಗ್ಗೆ ಹೆಚ್ಚಿನ ಮಾಹಿತಿ ಹಿಂದಿ ಭಾಷೆಯಲ್ಲಿ ದಾಖಲಾಗಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಿಂದಿ ಭಾಷೆಯನ್ನು ಅಧ್ಯಯನ ಮಾಡಬೇಕು ಎಂದರು.


ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಸುಮಾ ಟಿ. ಆರ್. ಪ್ರಸ್ತಾವನೆಗೈದರು. ಗ್ರಂಥಪಾಲಕಿ ಡಾ. ವನಜ ಸ್ವಾಗತಿಸಿ, ಗ್ರಂಥಾಲಯದ ಸಹಾಯಕಿ ಅಶ್ವಿನಿ ವಂದಿಸಿದರು. ವಿದ್ಯಾರ್ಥಿನಿ ಅಸ್ತುತಿ ಕಾರ್ಯಕ್ರಮ ನಿರೂಪಿಸಿದರು. ಪ್ರಥಮ ಬಿ.ಎಸ್ಸಿ ವಿದ್ಯಾರ್ಥಿನಿ ಖುಷಿ ಬಿ. ಸನಿಲ್ ಪುಸ್ತಕ ವಿಮರ್ಶೆ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net