ಹೊಸ ಆವಿಷ್ಕಾರ ಮೂಲಕ ಸಮಾಜಕ್ಕೆ ಕೊಡುಗೆ- ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಐಐಟಿಎಂ ಚೆನೈ ಸಂಸ್ಥೆಯ ಪ್ರೊ.ಎ.ಎಸ್.ರಾಮಚಂದ್ರ ರಾವ್ ಕರೆ

mng sep 21- University sammelana
ಭೌತಶಾಸ್ತ್ರ ಮತ್ತು ನ್ಯಾನೋ ತಂತ್ರಜ್ಞಾನ’ ಕುರಿತು ಮಂಗಳೂರು ವಿವಿ ಯಲ್ಲಿ ಆರಂಭಗೊಂಡ ಮೂರು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ವನ್ನು ಐಐಟಿಎಂ ಚೆನೈ ಸಂಸ್ಥೆಯ ಪ್ರಾಧ್ಯಾಪಕ ಪ್ರೊ.ಎ.ಎಸ್.ರಾಮಚಂದ್ರ ರಾವ್ ಉದ್ಘಾಟಿಸಿದರು. ಮಂಗಳೂರು ವಿವಿ ಪ್ರಭಾರ ಕುಲಪತಿ ಪ್ರೊ.ಜಯರಾಜ್ ಅಮೀನ್, ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕ ಪ್ರೊ.ಎಂ.ವಿ.ಎನ್.ಅಂಬಿಕಾ ಪ್ರಸಾದ್ ಮುಂತಾದವರು ಮಾತನಾಡಿದರು.
Published on

ವಿಜಯವಾಣಿ ಸುದ್ದಿಜಾಲ ಮಂಗಳೂರು

  • ಯಾವುದೇ ಸಂಶೋಧನೆಯ ಕ್ಷೇತ್ರದಲ್ಲಿ ಯಶಸ್ಸು ಕಾಣಬೇಕಾದರೆ ಆ ಸಂಶೋಧನಾ ಕಾರ್ಯದ ಹಿಂದೆ ನಮ್ಮ ತಾಳ್ಮೆ, ಉತ್ಸಾಹ, ಕಠಿಣ ಪರಿಶ್ರಮ ಪ್ರಮುಖ ಪಾತ್ರವಹಿಸುತ್ತದೆ. ವಿಜ್ಞಾನ ಹಾಗೂ ಇಂದಿನ ಆಧುನಿಕ ತಂತ್ರಜ್ಞಾನಗಳ ಕ್ಷೇತ್ರಗಳಲ್ಲಿ ಯುವ ಸಮುದಾಯ ಹೆಚ್ಚುಹೆಚ್ಚು ತೊಡಗಿಸಿಕೊಂಡು ಹೊಸ ಹೊಸ ಆವಿಷ್ಕಾರದೊಂದಿಗೆ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕಿದೆ ಎಂದು ಐಐಟಿಎಂ ಚೆನೈ ಸಂಸ್ಥೆಯ ಪ್ರಾಧ್ಯಾಪಕ ಪ್ರೊ.ಎ.ಎಸ್.ರಾಮಚಂದ್ರ ರಾವ್ ಹೇಳಿದರು.
  • ಅವರು ಮಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಆಶ್ರಯದಲ್ಲಿ ನಡೆಯುವ ’ಭೌತಶಾಸ್ತ್ರ ಮತ್ತು ನ್ಯಾನೋ ತಂತ್ರಜ್ಞಾನ’ ವಿಷಯದಲ್ಲಿ ಮೂರು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದರು.
  • ಮುಂದಿನ 30 ವರ್ಷಗಳು ನ್ಯಾನೋ ತಂತ್ರಜ್ಞಾನ ಕ್ಷೇತ್ರಗಳ ಮೂಲಕ ಅಮೂಲಾಗ್ರ ಬದಲಾವಣೆಯಾಗಲಿದೆ ಹಾಗೂ ಅನೇಕ ಅವಕಾಶಗಳ ವಿಸ್ತರಣೆಯಾಗಲಿದೆ ಎಂದರು.
  • ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿವಿ ಪ್ರಭಾರ ಕುಲಪತಿ ಪ್ರೊ.ಜಯರಾಜ್ ಅಮೀನ್ ಅವರು, ಇಂದು ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರವು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಭೌತಶಾಸ್ತ್ರ ಮತ್ತು ನ್ಯಾನೋ ಟೆಕ್ನಾಲಜಿ ಎಂಬ ಮಹತ್ವದ ವಿಷಯದಲ್ಲಿ ಮಂಗಳೂರು ವಿವಿಯ ಭೌತಶಾಸ್ತ್ರ ವಿಭಾಗವು ಮೂರು ದಿನಗಳ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನವನ್ನು ಆಯೋಜಿಸಿದ್ದು, ಅನೇಕ ಹೊಸ ಆವಿಷ್ಕಾರ ಮತ್ತು ಬೆಳವಣಿಗೆಗೆ ಈ ಸಮ್ಮೇಳನ ಸಾಕ್ಷಿಯಾಗಲಿ ಎಂದರು.
  • ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕ ಪ್ರೊ.ಎಂ.ವಿ.ಎನ್.ಅಂಬಿಕಾ ಪ್ರಸಾದ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಂಗಳೂರು ವಿವಿ ಭೌತಶಾಸ್ತ್ರ ವಿಭಾಗದ ಅಧ್ಯಕ್ಷರು ಹಾಗೂ ವಿವಿ ಹಣಕಾಸು ಅಧಿಕಾರಿ ಪ್ರೊ.ವೈ ಸಂಗಪ್ಪ ಸ್ವಾಗತಿಸಿದರು. ಸಮ್ಮೇಳನದ ಸಂಚಾಲಕ ಪ್ರೊ.ದೇವೆಂದ್ರಪ್ಪ ವಂದಿಸಿದರು. ರಕ್ಷಾ ಕಾರ್ಯಕ್ರಮ ನಿರೂಪಿಸಿದರು.
  • ಸಮ್ಮೇಳನದಲ್ಲಿ ವಿವಿಧ ಸಂಸ್ಥೆಗಳ ಸುಮಾರು 250 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದು, ವಿವಿಧ ದೇಶಗಳ ಒಟ್ಟು 14 ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ವಿಷಯ ತಜ್ಞರು ಭೌತಶಾಸ್ತ್ರ ಹಾಗೂ ನ್ಯಾನೋ ತಂತ್ರಜ್ಞಾನದ ಕ್ಷೇತ್ರದ ವಿಷಯಗಳ ಕುರಿತು ಉಪನ್ಯಾಸ ನೀಡಲಿದ್ದಾರೆ. ಗುರುವಾರದದಂದು ವಿವಿಧ ಸಂಪನ್ಮೂಲ ವ್ಯಕ್ತಿಗಳ ವಿಶೇಷ ಉಪನ್ಯಾಸಗಳ ಬಳಿಕ ಯಕ್ಷಗಾನ, ಭರತನಾಟ್ಯ ಹಾಗೂ ಇತರ ನೃತ್ಯಪ್ರಕಾರಗಳ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ನಡೆಯಿತು.

ೆಟೋ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net