ತುಳುನಾಡ ಸಂಸ್ಕೃತಿ ಉಳಿಸಲು ಆಟಿದ ಕೂಟ ಶಾಸಕ ವೇದವ್ಯಾಸ ಕಾಮತ್ ಅಭಿಮತ

mng--8 Aug urva Atida kuta
Published on

ಮಂಗಳೂರು: ತುಳುನಾಡಿನ ಮೂಲ ಸಂಸ್ಕೃತಿ-ಸಂಪ್ರದಾಯ ಉಳಿಸುವ ನಿಟ್ಟಿನಲ್ಲಿ ಆಟಿದ ಕೂಟ ಕಾರ್ಯಕ್ರಮ ಅವಶ್ಯ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.


ಉರ್ವಸ್ಟೋರ್ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಇತ್ತೀಚೆಗೆ ಬಂಟರ ಸಂಘ ಅಶೋಕನಗರ, ಉರ್ವ ಇದರ ಆಶ್ರಯದಲ್ಲಿ ‘ಮರಿಯಾಲಡೊಂಜಿ ಐತಾರ ಆಟಿದ ಕೂಟ’ ಉದ್ಘಾಟಿಸಿ ಅವರು ಮಾತನಾಡಿದರು.


ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಉದ್ಘಾಟಿಸಿ, ಆಟಿ ಕೂಟದಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಮೂಲ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಿಳಿಸುವ ಪ್ರಯತ್ನ ಶ್ಲಾಘನೀಯ ಎಂದರು.


ಬಂಟರ ಸಂಘ, ಅಶೋಕನಗರ-ಉರ್ವ ಇದರ ಅಧ್ಯಕ್ಷ ರವಿಚಂದ್ರ ಶೆಟ್ಟಿ ಅಶೋಕನಗರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಕೆಎಂಸಿಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಡಾ.ಕೆ. ನಿತ್ಯಾನಂದ ಚೌಟ, ರಾಮಕೃಷ್ಣ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ಇದರ ಅಧ್ಯಕ್ಷ ಜೈರಾಜ್ ಬಿ.ರೈ, ಇಂಟರ್‌ನ್ಯಾಶನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್ ಇದರ ಸಂಘಟನಾ ಕಾರ್ಯದರ್ಶಿ ರಾಜ್‌ಗೋಪಾಲ್ ರೈ, ತಾಲೂಕು ಬಂಟರ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಯಕ್ಷಧ್ರುವ ಪಟ್ಲ ಫೌಂಡೇಶನಿನ ಮಹಿಳಾ ಘಟಕದ ಗೌರವ ಅಧ್ಯಕ್ಷೆ ಆರತಿ ಆಳ್ವ, ಕಾರ್ಪೊರೇಟರ್ ಜಗದೀಶ್ ಶೆಟ್ಟಿ, ಅಶೋಕನಗರ-ಉರ್ವ ಬಂಟರ ಸಂಘದ ಗೌರವ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮೇಗಿನಮಾಲಾಡಿ, ಉಪಾಧ್ಯಕ್ಷರಾದ ಶೇಖರ್ ಶೆಟ್ಟಿ, ನಳಿನಿ ರೈ, ಕೋಶಾಧಿಕಾರಿ ಜೆ.ವಿ.ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ 16 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಪ್ರತಿಭಾವಂತೆ ಪ್ರಣಮ್ಯಾ ಜೆ.ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಸರಿತಾ ಶೆಟ್ಟಿ, ಸುಪ್ರಿತಾ ಶೆಟ್ಟಿ, ರಕ್ಷಾ ಆರ್.ಶೆಟ್ಟಿ ಸಹಕರಿಸಿದರು.


ಬಂಟರ ಸಂಘ, ಅಶೋಕನಗರ-ಉರ್ವದ ಪ್ರಧಾನ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ರಾಜೇಶ್ ಶೆಟ್ಟಿ ವಂದಿಸಿದರು. ಜೊತೆ ಕಾರ್ಯದರ್ಶಿ ಸತೀಶ್ ಶೆಟ್ಟಿ ಕೊಡಿಯಾಲ್‌ಬೈಲ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸುಮಾರು 22 ಬಗೆಯ ತುಳುನಾಡಿನ ಸಾಂಪ್ರದಾಯಿಕ ಖಾದ್ಯಗಳನ್ನು ಉಣಬಡಿಸಲಾಯಿತು. ಸಂಘದ ಸದಸ್ಯರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net