

ಮಂಗಳೂರು: ಮಂಗಳೂರು ಜಂಕ್ಷನ್ - ಯಶವಂತಪುರ ನಡುವೆ ಚಲಿಸುವ ರೈಲು ಸಂಖ್ಯೆ 16576 ರ ಸಮಯಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಈ ರೈಲು ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಹೊರಟು ಸಂಜೆ 4.30ಕ್ಕೆ ಬೆಂಗಳೂರಿನ ಯಶವಂತಪುರ ತಲುಪಲಿದೆ. ಇತ್ತೀಚೆಗೆ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಸಲ್ಲಿಸಿದ ಮನವಿಯ ಮೇರೆಗೆ ಈ ಬದಲಾವಣೆಯನ್ನು ತರಲಾಗಿದೆ. ರೈಲ್ವೆ ಸಚಿವಾಲಯವು ತಂದಿರುವ ಈ ಬದಲಾವಣೆಯಿಂದ ಮಂಗಳೂರು ಮತ್ತು ಬೆಂಗಳೂರು ನಡುವಿನ ಪ್ರಯಾಣಿಕರಿಗೆ ಬಹಳ ಅನುಕೂಲವಾಗಲಿದೆ ಎಂದು ಬ್ರಿಜೇಶ್ ಚೌಟ ತಿಳಿಸಿದ್ದಾರೆ. ತನ್ನ ಮನವಿಗೆ ಸ್ಪಂದಿಸಿ ಬಹು ಕಾಲದಿಂದ ಬಾಕಿ ಉಳಿದಿರುವ ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಾಯಣಿಕರ ಈ ಬೇಡಿಕೆಯನ್ನು ಈಡೇರಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರ್ವೈೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಧನ್ಟಯವಾದ ಸಲ್ಲಿಸುವುದಾಗಿ ಚೌಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.