ಅನುಚಿತ ವರ್ತನೆ ಪೊಲೀಸರಿಗೊಪ್ಪಿಸಿದ ಯುವತಿಯರು

FIR-2
Published on

ಮಂಗಳೂರು: ಫುಟ್‌ಪಾತ್‌ನಲ್ಲಿ ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನೋರ್ವನ ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಶಬರಿ ಎಂಬಾತ ಪೊಲೀಸ್ ವಶವಾದವನು. ಮಂಗಳವಾರ ಬೆಳಗ್ಗೆ ನಗರದ ಮಂಜೇಶ್ವರ ಗೋವಿಂದ ಪೈ ವೃತ್ತದ ಬಳಿ ಯುವತಿಯರು ನಡೆದುಕೊಂಡು ಹೋಗುತ್ತಿದ್ದಾಗ ಈತ ಅನುಚಿತವಾಗಿ ವರ್ತಿಸುತ್ತಿದ್ದ. ಯುವಕನ್ನು ತರಾಟೆಗೆ ತೆಗೆದುಕೊಂಡ ಯುವತಿಯರು ಬಳಿಕ ಆತನ ಶರ್ಟ್ ಬಿಚ್ಚಿಸಿ ಪೊಲೀಸರಿಗೆ ದೂರು ನೀಡಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಲ್ಲದೆ ಆತನ ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net