

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಾನ ನಿಲ್ದಾಣದ ಒಟ್ಟು ಮೂರು ಕಡೆ ಬಾಂಬ್ ಇಟ್ಟಿರುವ ಶಂಕೆ ವ್ಯಕ್ತವಾಗಿದೆ.
ಇಂಡಿಗೋ ವಿಮಾನದಲ್ಲಿಯೂ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು, ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಟೇಕಾಫ್ ಆಗಿ, ಹೈದರಾಬಾದ್ಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ವಾಪಸ್ ಕರೆಯಿಸಿ ಪರಿಶೀಲನೆ ನಡೆಸಲಾಗುತ್ತಿದೆ. ವಿಮಾನದಲ್ಲಿದ್ದ 126 ಪ್ರಯಾಣಿಕರನ್ನು ಕೆಳಗಿಳಿಸಿ ತಪಾಸಣೆ ಮಾಡಲಾಗುತ್ತಿದೆ.
ವಿಮಾನ ನಿಲ್ದಾಣದ ಹೊರಭಾಗದಲ್ಲಿ ಪತ್ತೆಯಾದ ಬಾಂಬ್ ನಿಷ್ಕ್ರಿಯ ಪ್ರಕ್ರಿಯೆ ಮಂಗಳೂರು ಕೆಂಜಾರು ಮೈದಾನದಲ್ಲಿ ನಡೆಯುತ್ತಿದೆ. ಬಾಂಬ್ ನಿಷ್ಕ್ರಿಯ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ.
ಬಾಂಬ್ ಪತ್ತೆ ಪ್ರಕರಣದಿಂದ ರಾಜ್ಯಾದಂತ್ಯ ಹೈಅಲರ್ಟ್ ಘೋಷಣೆಯಾಗಿದೆ. ಮೈಸೂರಿನಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಾರ್ವಜನಿಕರಿಗೆ ಅರಮನೆ ಪ್ರವೇಶ ಬಂದ್ ಮಾಡಲಾಗಿದೆ. ಅರಮನೆಯಲ್ಲಿ ತುರ್ತು ನಿರ್ವಹಣಾ ಕೆಲಸದ ನಿಮಿತ್ತ ಅರಮನೆ ಪ್ರವೇಶ ನಿಷೇಧಿಸಲಾಗಿದೆ. ಎನ್‌ಎಸ್‌ಜಿ ತಂಡದಿಂದ ಅರಮನೆ ಆವರಣದಲ್ಲಿ ಭದ್ರತಾ ತಪಾಸಣೆಯ ಅಣಕು ಪ್ರದರ್ಶನ ನಡೆಯುತ್ತಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಹೈ ಆಲರ್ಟ್ ಘೋಷಿಸಲಾಗಿದೆ. ಗಡಿಪ್ರದೇಶದಲ್ಲಿ ವಾಹನಗಳ ತಪಾಸಣೆ ನಡೆಯುತ್ತಿದೆ. (ದಿಗ್ವಿಜಯ ನ್ಯೂಸ್)