ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಹುಸಿ ಬಾಂಬ್​ ಬೆದರಿಕೆ ಕರೆ

mangalore Airport
Published on

ಮಂಗಳೂರು: ಮಂಗಳೂರಿನ ಬಜಪೆ ಬಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಮ್ಮೆ ಹುಸಿ ಬಾಂಬ್​ ಬೆದರಿಕೆ ಕರೆ ಬಂದಿದೆ.

ಅನಾಮಿಕ ಕರೆ ಮಾಡಿ ಏರ್​ಪೋರ್ಟ್​ಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಸಿಐಎಸ್​ಎಫ್ ಸಿಬ್ಬಂದಿ ಹಾಗೂ ಪೊಲೀಸರು ಸೇರಿ ಏರ್​ಪೋರ್ಟ್​ನಲ್ಲಿ ತೀವ್ರ ತಪಾಸಣೆ ನಡೆಸಿದ್ದಾರೆ.

ಮಧ್ಯಾಹ್ನದ ಸುಮಾರಿಗೆ ಬಾಂಬ್​ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಬಜಪೆ ಪೊಲೀಸ್ ಠಾಣೆಗೆ ಏರ್​ಪೋರ್ಟ್ ಅಧಿಕಾರಿಗಳು ದೂರು ನೀಡಿದ್ದಾರೆ. ಯಾರೋ ಕಿಡಿಗೇಡಿಗಳು ಹುಸಿ ಬಾಂಬ್ ಬೆದರಿಕೆ ಕರೆ ಮಾಡಿರಬಹುದೆಂದು ಶಂಕಿಸಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net