44.33 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ

mng-10 sep Gold
Published on

ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ 44,33,780 ರೂ. ಮೌಲ್ಯದ 869 ಗ್ರಾಂ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.


ದುಬೈನಿಂದ ಹೊರಟಿದ್ದ ಕಾಸರಗೋಡು ಮತ್ತು ಮಂಗಳೂರಿನ ನಾಲ್ವರು ಪುರುಷರು ಹಾಗೂ ಓರ್ವ ಮಹಿಳೆ ಸೆ.6ರಿಂದ 10ರ ಅವಧಿಯಲ್ಲಿ ಚಿನ್ನವನ್ನು ಪೇಸ್ಟ್, ಪೌಡರ್ ರೂಪದಲ್ಲಿ ಪ್ಯಾಂಟ್, ಒಳವಸ್ತ್ರ, ಬನಿಯಾನ್, ಶೂ, ಗುದದ್ವಾರಗಳಲ್ಲಿ ಬಚ್ಚಿಟ್ಟು ಸಾಗಿಸಲು ಯತ್ನಿಸಿದ್ದರು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net