ಮಂಗಳೂರು ಗಾಂಜಾ ಸೇವನೆ ಮೂವರು ಬಂಧನ

drugs
Published on

ಮಂಗಳೂರು: ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಗಾಂಜಾ ಸೇವನೆಗೆ ಸಂಬಂಧಿಸಿ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪಾಂಡೇಶ್ವರ ಠಾಣಾ ವ್ಯಾಪ್ತಿಯ ಮಹಾಕಾಳಿಪಡ್ಪು ಮೈದಾನದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ವಳಚ್ಚಿಲ್‌ಪದವು ನಿವಾಸಿ ಚಂದ್ರಶೇಖರ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ನಗರದ ಲಾಲ್‌ಬಾಗ್ ಬಳಿ ಅಮಲು ಪದಾರ್ಥ ಸೇವಿಸಿ ತೂರಾಡುತ್ತಿದ್ದ ಕೇರಳ ರಾಜ್ಯದ ಕೊಟ್ಟಾಯಂನ ಅಲೆನ್ ಸಿಬಿ (19) ಪೊಲೀಸರು ವಶಕ್ಕೆ ಪಡೆದಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಬಾವುಟಗುಡ್ಡೆ ಬಳಿ ಅಮಲು ಪದಾರ್ಥ ಸೇವಿಸಿ ತೂರಾಡುತ್ತಿದ್ದ ಕೇರಳದ ತ್ರಿಶ್ಶೂರು ಜಿಲ್ಲೆಯ ನಿವಾಸಿ, ಕದ್ರಿಯ ಪಿಜಿಯೊಂದರಲ್ಲಿ ವಾಸವಿದ್ದ ಬಾಬಿನ್ ಸೆಬಾಸ್ಟಿಯನ್ (23) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದಾಗಿ ತಿಳಿಸಿದ್ದಾನೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈತನ ವಿರುದ್ಧ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net