ಕದ್ರಿಯಲ್ಲಿ 18ನೇ ವರ್ಷದ ಸಾಮೂಹಿಕ 108 ಸೂರ್ಯನಮಸ್ಕಾರ

mng--2 Feb kadri yogasana 2
Published on

ಮಂಗಳೂರು: ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನ, ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಕರ್ನಾಟಕ ಮತ್ತು ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ, ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಪವಿತ್ರ ರಥ ಸಪ್ತಮಿಯ ಅಂಗವಾಗಿ 18ನೇ ವರ್ಷದ ಸಾಮೂಹಿಕ 108 ಸೂರ್ಯನಮಸ್ಕಾರ ಭಾನುವಾರ ಜರಗಿತು. ಸುಮಾರು 450ಕ್ಕೂ ಮಿಕ್ಕಿ ಯೋಗಬಂಧುಗಳು, ಸಾರ್ವಜನಿಕರು, ಆಮಂತ್ರಿತರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಭಾಗವಹಿಸಿದರು.

ಯೋಗ ಭಾರತದ ಒಂದು ಅಮೂಲ್ಯ ಕೊಡುಗೆ. ಸೂರ್ಯನಮಸ್ಕಾರವು ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಉತ್ತಮ ಅಭ್ಯಾಸ. ಅದರೊಂದಿಗೆ ಪೌರಾಣಿಕ, ಅಧ್ಯಾತ್ಮಿಕ ಹಿನ್ನೆಲೆ ಇರುವ ಆದಿ ಯೋಗಿ ಮಹೇಶ್ವರನ ಸನ್ನಿಧಾನದಲ್ಲಿ ರಥಸಪ್ತಮಿಯ ಪುಣ್ಯ ಪರ್ವದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವು ಇನ್ನಷ್ಟು ಪವಿತ್ರ ಮತ್ತು ಪುಣ್ಯ ಫಲ ಹೊಂದಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕಲ್ಕೂರ ಹೇಳಿದರು.

ಮನೋವಿಜ್ಞಾನ ತಜ್ಞ ಡಾ. ರವೀಶ್ ತುಂಗಾ, ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಏಕನಾಥ ಬಾಳಿಗ ಮಾತನಾಡಿದರು.

ಭಜನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಸುಭಾಸ್ಚಂದ್ರ ಕಾಂಚನ್ ಸ್ವಾಗತಿಸಿದರು. ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಧನಂಜಯ ಕೆ. ವಂದಿಸಿದರು. ಉಪಾಧ್ಯಕ್ಷ ಪರಮೇಶ್ವರ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

ಉಪಾಧ್ಯಕ್ಷ ಯೋಗೀಶ್ ಶೆಟ್ಟಿ, ಕೋಶಾಧಿಕಾರಿ ನರಸಿಂಹ ಹೆಗ್ಡೆ, ಇತರ ಪದಾಧಿಕಾರಿಗಳು, ಟ್ರಸ್ಟಿಗಳು, ಶಿಕ್ಷಕರು ಸೂರ್ಯನಮಸ್ಕಾರ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net