ಮಂಗಳೂರು 82 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ನಾಶ

82 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಬುಧವಾರ ಮೂಲ್ಕಿ ಕೊಳ್ನಾಡು ಕೈಗಾರಿಕಾ ಪ್ರದೇಶದಲ್ಲಿರುವ ರಾಮ್‌ಕಿ ಎನರ್ಜಿ ಆ್ಯಂಡ್ ಎನ್‌ವಿರೋನ್‌ಮೆಂಟ್ ಲಿಮಿಟೆಡ್‌ನಲ್ಲಿ ನ್ಯಾಯಾಲಯದ ಅನುಮತಿ ಪಡೆದು ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ಸುಟ್ಟು ನಾಶಪಡಿಸಿ ವಿಲೇವಾರಿ ಮಾಡಲಾಯಿತು.
82 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಬುಧವಾರ ಮೂಲ್ಕಿ ಕೊಳ್ನಾಡು ಕೈಗಾರಿಕಾ ಪ್ರದೇಶದಲ್ಲಿರುವ ರಾಮ್‌ಕಿ ಎನರ್ಜಿ ಆ್ಯಂಡ್ ಎನ್‌ವಿರೋನ್‌ಮೆಂಟ್ ಲಿಮಿಟೆಡ್‌ನಲ್ಲಿ ನ್ಯಾಯಾಲಯದ ಅನುಮತಿ ಪಡೆದು ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ಸುಟ್ಟು ನಾಶಪಡಿಸಿ ವಿಲೇವಾರಿ ಮಾಡಲಾಯಿತು.
Published on
ಮಂಗಳೂರು: ನಗರ ಪೊಲೀಸ್ ಕಮಿಶನರೇಟ್ ವ್ಯಾಪ್ತಿಯಲ್ಲಿ ಪತ್ತೆಯಾದ 82 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಬುಧವಾರ ಮೂಲ್ಕಿ ಕೊಳ್ನಾಡು ಕೈಗಾರಿಕಾ ಪ್ರದೇಶದಲ್ಲಿರುವ ರಾಮ್‌ಕಿ ಎನರ್ಜಿ ಆ್ಯಂಡ್ ಎನ್‌ವಿರೋನ್‌ಮೆಂಟ್ ಲಿಮಿಟೆಡ್‌ನಲ್ಲಿ ನ್ಯಾಯಾಲಯದ ಅನುಮತಿ ಪಡೆದು ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ಸುಟ್ಟು ನಾಶಪಡಿಸಿ ವಿಲೇವಾರಿ ಮಾಡಲಾಯಿತು.
87 ಎನ್.ಡಿ.ಪಿ.ಎಸ್. ಪ್ರಕರಣಗಳನ್ನು ದಾಖಲಿಸಿ 157 ಮಾರಾಟಗಾರ ಆರೋಪಿಗಳನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಗಳಲ್ಲಿ 8,18,30,130 ರೂ. ಮೌಲ್ಯದ 148 ಕೆ.ಜಿ. 615 ಗ್ರಾಂ ಗಾಂಜಾ, 7 ಕೆ.ಜಿ 165 ಗ್ರಾಂ ಎಂ.ಡಿ.ಎಂ.ಎ., 1 ಕೆಜಿ 705 ಗ್ರಾಂ ಹೈಡ್ರೋ ವೀಡ್ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಅವಧಿಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 463 ವ್ಯಕ್ತಿಗಳ ವಿರುದ್ಧ 356 ಪ್ರಕರಣಗಳನ್ನು ದಾಖಲಿಸಲಾಗಿದೆ.
ನಗರ ಪೊಲೀಸ್ ವ್ಯಾಪ್ತಿಯ 16 ಪೊಲೀಸ್ ಠಾಣೆಗಳ 59 ಎನ್.ಡಿ.ಪಿ.ಎಸ್. ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ 450 ಕೆ.ಜಿ ಗಾಂಜಾ, 43 ಕೆ.ಜಿ. 260 ಗ್ರಾಂ ಎಂ.ಡಿ. ಎಂ.ಎ., 80 ಗ್ರಾಂ ಚರಸ್, 880 ಗ್ರಾಂ ಹೈಡ್ರೋ ವೀಡ್ ಗಾಂಜಾ, 1 ಕೆ.ಜಿ. 200 ಗ್ರಾಂ ಭಾಂಗ್ ವಶಪಡಿಸಿಕೊಳ್ಳಲಾಗಿತ್ತು.
ನಾಶಪಡಿಸಲಾದ ಮಾದಕ ವಸ್ತುಗಳಲ್ಲಿ ಪ್ರಮುಖವಾಗಿ 2024ನೇ ಸಾಲಿನಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸುಮಾರು 75 ಕೋಟಿ ಮೌಲ್ಯದ 37 ಕೆ.ಜಿ. ಎಂ.ಡಿ.ಎಂ.ಎ., 2025ನೇ ಸಾಲಿನಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಅಂದಾಜು 4.47 ಕೋಟಿ ಮೌಲ್ಯದ ಸುಮಾರು 4 ಕೆ.ಜಿ. ಎಂ.ಡಿ.ಎಂ.ಎ., ಕೊಣಾಜೆ ಪೊಲೀಸ್ ಠಾಣೆಯ ಸುಮಾರು 20 ಲಕ್ಷ ಮೌಲ್ಯದ 106 ಕೆ.ಜಿ. ಗಾಂಜಾ ಹಾಗೂ ಮೂಡುಬಿದಿರೆ ಪೊಲೀಸ್ ಠಾಣೆಯ ಸುಮಾರು 36 ಲಕ್ಷ ಮೌಲ್ಯದ 111 ಕೆ.ಜಿ. ಗಾಂಜಾ ಸೇರಿವೆ.
ಸಾರ್ವಜನಿಕರು ಮಾದಕ ವಸ್ತುಗಳಿಗೆ ಸಂಬಂದಿಸಿದ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣವೇ ಪೊಲೀಸ್ ಇಲಾಖೆಯಿಂದ ಸೃಜನೆ ಮಾಡಲಾಗಿರುವ ಕ್ಯೂ.ಅರ್ ಕೋಡ್ ಮೂಲಕ ಅಥವಾ ಪೊಲೀಸ್ ಕಂಟ್ರೋಲ್ ರೂಮ್ 112 / 9480802321 ಮಾಹಿತಿ ನೀಡುವಂತೆ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net