

ಮಂಗಳೂರು: ಕೊಂಕಣಿ ಕವಿ, ಕವಿತಾ ಟ್ರಸ್ಟ್‌ನ ಸಂಸ್ಥಾಪಕ ಮೆಲ್ವಿನ್ ರೊಡ್ರಿಗಸ್ ಅವರನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ಸಲಹಾ ಮಂಡಳಿಯ ಸಂಚಾಲಕರಾಗಿ ನವದೆಹಲಿಯ ಸಾಹಿತ್ಯ ಅಕಾಡೆಮಿಯಲ್ಲಿ ಶನಿವಾರ ನಡೆದ ಸಾಮಾನ್ಯ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.
ಸಾಹಿತ್ಯ ಅಕಾಡೆಮಿಯ ಇತಿಹಾಸದಲ್ಲಿ ಕೊಂಕಣಿ ಸಲಹಾ ಮಂಡಳಿಯ ನೇತೃತ್ವ ವಹಿಸಲು ಗೋವಾದ ಹೊರಗಿನವರೊಬ್ಬರು ಆಯ್ಕೆಯಾಗಿರುವುದು ಇದೇ ಮೊದಲಾಗಿದ್ದು, ಮುಂದಿನ 5 ವರ್ಷಗಳ ಅವಧಿಗೆ ಕವಿ ಮೆಲ್ವಿನ್ ರೊಡ್ರಿಗಸ್ ಸಾಹಿತ್ಯ ಅಕಾಡಮಿಯಲ್ಲಿ ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.
ಜನವರಿ 2023 ರಲ್ಲಿ ಮೆಲ್ವಿನ್ ಅವರನ್ನು ಸಾಹಿತ್ಯ ಅಕಾಡೆಮಿಯ ಸಾಮಾನ್ಯ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿದ್ದು, ಅಕಾಡೆಮಿಗೆ ಸಂಯೋಜಿತವಾಗಿರುವ ವಿವಿಧ ಕೊಂಕಣಿ ಸಂಸ್ಥೆಗಳಿಂದ ಪಡೆದ ಹಲವಾರು ಶಿಫಾರಸುಗಳಲ್ಲಿ ಮೆಲ್ವಿನ್ ಅವರ ಹೆಸರನ್ನು ಜನರಲ್ ಕೌನ್ಸಿಲ್ ಆಯ್ಕೆ ಮಾಡಿದೆ.