ಮಂಗಳೂರು ತಾಲೂಕು ಬಿಲ್ಲವ ಸಂಘ ಉದ್ಘಾಟಿಸಿದ ಜನಾರ್ದನ ಪೂಜಾರಿ

MNG-September 4-Billava
Published on

ಮಂಗಳೂರು: ಉತ್ತಮ ಕೆಲಸ ಮಾಡಿದಾಗ ಜಯ ಖಂಡಿತ ನಮ್ಮದಾಗುತ್ತದೆ. ಯಾವುದಾದರೂ ಕಷ್ಟ ಬಂದರೆ ಅನ್ನು ನಿವಾರಿಸುವ ಶಕ್ತಿಯನ್ನು ದೇವರು ನೀಡುತ್ತಾನೆ. ಆದ್ದರಿಂದ ಹೃದಯದಲ್ಲಿ ದೇವರ ಬಗ್ಗೆ ಭಯ-ಭಕ್ತಿ, ಮಾತಿನಂತೆ ನಡೆ ಇದ್ದರೆ ಯಶಸ್ಸು ಸಾಧ್ಯ ಎಂದು ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ.
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೊರಗಪ್ಪ ಸ್ಮಾರಕ ಸಭಾಭವನದಲ್ಲಿ ಭಾನುವಾರ ಮಂಗಳೂರು ತಾಲೂಕು ಬಿಲ್ಲವ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಂಗಳೂರು ತಾಲೂಕು ಬಿಲ್ಲವ ಸಂಘದ ಉದ್ಘಾಟನೆ ಸಂತೋಷದಿಂದ ಮಾಡಿದ್ದು, ಯಶಸ್ವಿಯಾಗಿ ಮುಂದುವರಿಯಲಿ ಎಂದು ಹಾರೈಸಿದರು.
ಬಿಲ್ಲವ ಮುಖಂಡ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಿಲ್ಲವ ಸಮುದಾಯ ಸಂಘಟನಾ ದೃಷ್ಟಿಯಿಂದ ಹೊಸ ದಿಕ್ಸೂಚಿ, ಚಿಂತನೆಯಲ್ಲಿ ಸಾಗಬೇಕಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಿತೇಂದ್ರ ಜೆ. ಸುವರ್ಣ, ಬಿಲ್ಲವ ಸಂಘಟನೆಗಳ ಸಮಸ್ಯೆಗಳ ಪರಿಹಾರ, ಸಮುದಾಯದ ಒಗ್ಗಟ್ಟಿನ ಜತೆಗೆ ಪರಂಪರೆ, ಸಂಸ್ಕೃತಿಯನ್ನೊಳಗೊಂಡ ಧರ್ಮಶಿಕ್ಷಣಕ್ಕೆ ಆದ್ಯತೆ ನೀಡುವುದು ನೂತನ ತಾಲೂಕು ಬಿಲ್ಲವ ಸಂಘದ ಚಿಂತನೆಯಾಗಿದೆ ಎಂದರು.
ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ರುಕ್ಮಯ ಪೂಜಾರಿ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಮ್, ಎಸ್‌ಎನ್‌ಡಿಪಿ ರಾಜ್ಯಾಧ್ಯಕ್ಷ ಸೈದಪ್ಪ ಗುತ್ತೇದಾರ್, ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರ್, ಬಿಲ್ಲವ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಜಿಲ್ಲಾ ಮಹಿಳಾ ಒಕ್ಕೂಟ ಅಧ್ಯಕ್ಷೆ ಚಂಚಲಾ ತೇಜೋಮಯ, ಗೋಕರ್ಣನಾಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಶ್ರೀ ಗುರು ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಜಯಾನಂದ ಎಂ., ಹಿರಿಯ ವಕೀಲ ಟಿ. ನಾರಾಯಣ ಪೂಜಾರಿ, ನಾರಾಯಣಗುರು ಅಧ್ಯಯನ ಪೀಠ ನಿರ್ದೇಶಕ ಡಾ. ಗಣೇಶ ಅಮೀನ್ ಸಂಕಮಾರ್, ಯುವನಾಯಕ ಅಕ್ಷಿತ್ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಉದಯ ಅಮೀನ್ ಮಟ್ಟು, ನಮ್ಮ ಕುಡ್ಲ ನಿರ್ದೇಶಕ ಲೀಲಾಕ್ಷ ಕರ್ಕೇರ ಪಾಲ್ಗೊಂಡಿದ್ದರು. ತಾಲೂಕು ಬಿಲ್ಲವ ಸಂಘದ ಗೌರವಾಧ್ಯಕ್ಷ ರಂಜನ್ ಮಿಜಾರ್, ಉಪಾಧ್ಯಕ್ಷರಾದ ಸುರೇಶ್ ಚಂದರ್ ಕೋಟ್ಯಾನ್, ಪಾರ್ವತಿ ಅಮೀನ್, ಅವಿನಾಶ್ ಬಂಗೇರ, ಗಣೇಶ್ ಪೂಜಾರಿ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಲೋಕನಾಥ್ ಪೂಜಾರಿ ಸ್ವಾಗತಿಸಿದರು. ಕೋಶಾಧಿಕಾರಿ ಪುರುಷೋತ್ತಮ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net