ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

asid
Published on

ಕಡಬ: ಕಾಲೇಜು ಆವರಣದಲ್ಲಿ ಪರೀಕ್ಷೆ ತಯಾರಿಯಲ್ಲಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತನೊಬ್ಬ ಆ್ಯಸಿಡ್ ದಾಳಿ ಮಾಡಿರುವ ಘಟನೆ ಇಂದು ಸೋಮವಾರ ಇಲ್ಲಿನ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕೇರಳದ ವ್ಯಕ್ತಿ ಅಬೀನ್ ತನ್ನ ಮುಖ, ತಲೆ ಮುಚ್ಚಿ ಈ ಕೃತ್ಯ ಎಸಗಿರುವ ಮಾಹಿತಿ ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net