ಜ.31 ರಂದು ಮಾಂಗಲ್ಯ ಭಾಗ್ಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ

wedding-2
Published on

ಮೈಸೂರು: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಜಿಲ್ಲಾಡಳಿತದ ವತಿಯಿಂದ ಮಾಂಗಲ್ಯ ಭಾಗ್ಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವು ಜ.31 ರಂದು ಬೆಳಗ್ಗೆ 11:20 ರಿಂದ 12:20 ರವರೆಗೆ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆಯಲಿದ್ದು. ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಘನ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ರವರು ಉದ್ಘಾಟನೆಯನ್ನು ಮಾಡಲಿದ್ದಾರೆ.

ನಂಜನಗೂಡು ವಿಧಾನಸಭಾ ಕ್ಷೇತ್ರದ ಸದಸ್ಯರಾದ ದರ್ಶನ್ ದ್ರುವನಾರಾಯಣ್‌ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆಯ ಸಚಿವರಾದ ಕೆ.ವೆಂಕಟೇಶ್ ಮತ್ತು ಮುಜರಾಯಿ ಸಚಿವರಾದ ರಾಮಲಿಂಗರೆಡ್ಡಿ ಅವರು ಉಪಸ್ಥಿತರಿರುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net