ಮಾಂಗಲ್ಯ ಕಿತ್ತು ಪರಾರಿ

crime
Published on

ಹುಬ್ಬಳ್ಳಿ: ಗೋಕುಲ ರಸ್ತೆಯ ರವಿನಗರದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಕೊರಳಲ್ಲಿದ್ದ 2 ಲಕ್ಷ ರೂ. ಮೌಲ್ಯದ ಮಾಂಗಲ್ಯ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ.
ಮಂಜು ದರ್ಶಿನಿ ಹತ್ತಿರ ಮಹಿಳೆಯು ನಡೆದುಕೊಂಡು ಹೋಗುತ್ತಿರುವ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು, ಕೊರಳಿಗೆ ಕೈ ಹಾಕಿ 50 ಗ್ರಾಂ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿದ್ದಾರೆ. ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net