ಮಂಗಳೂರಿನಲ್ಲಿ ಅನೈತಿಕ ಪೊಲೀಸ್‌ಗಿರಿ

moral
Published on

ಮಂಗಳೂರು: ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಡೆದಿದೆ.
ಮಹಮ್ಮದ್ ಹಫೀಸ್ (20) ಹಲ್ಲೆಗೊಳಗಾದ ವಿದ್ಯಾರ್ಥಿ.


6 ಮಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಣಂಬೂರು ಬೀಚ್‌ಗೆ ವಿಹಾರಕ್ಕೆ ತೆರಳಿದ್ದು, ಈ ವೇಳೆ ಹಿಂಬಾಲಿಸಿಕೊಂಡು ಬಂದ ತಂಡ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ.


ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ 4 ಮಂದಿ ವಿದ್ಯಾರ್ಥಿನಿಯರು ತೆರಳಿದ್ದು, ಬೀಚ್‌ನಿಂದ ಅನ್ಯಕೋಮಿನ ವಿದ್ಯಾರ್ಥಿಗಳನ್ನು ಬೈಕ್ ನಲ್ಲಿ ಹಿಂಬಾಲಿಸಿ ಬಂದ ತಂಡ ಹಲ್ಲೆ ನಡೆಸಿದೆ. ಇನ್ನು ಗಾಯಗೊಂಡ ವಿದ್ಯಾರ್ಥಿ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net