ಕದ್ರಿಯಲ್ಲಿ ಮೇ 28ರಿಂದ 31 ರ ವರೆಗೆ ಮಾವು ಮೇಳ

maavu
maavu
Published on

ಪ್ರಮುಖ ಮುಖ್ಯಾಂಶಗಳು

  • ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಉದ್ಘಾಟಿಸಲಿದ್ದಾರೆ
  • ಗುಣಮಟ್ಟದ ಹಾಗೂ ನೈಸರ್ಗಿಕವಾದ ಮಾವು ಬೆಳೆಯ ವಿವಿಧ ತಳಿ

ಮಂಗಳೂರು: ಮಾವು ಬೆಳೆಗಾರರ ಮಾರಾಟದ ರಾಮನಗರ ಜಿಲ್ಲಾ ಸಂಘದ ವತಿಯಿಂದ ರೈತರಿಂದ ಗ್ರಾಹಕರಿಗೆ ನೇರ ಮಾರಾಟದಡಿ ಮಾವು ಮೇಳ-2026 ಮೇ 28ರಿಂದ 31ರ ವರೆಗೆ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ರಮೇಶ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮೇ 28ರಂದು ಬೆಳಗ್ಗೆ 11ಕ್ಕೆ ಉದ್ಘಾಟನೆ ನಡೆಯಲಿದ್ದು, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಉದ್ಘಾಟಿಸಲಿದ್ದಾರೆ. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ (ದರ್ಶನ್ ಎಚ್.ವಿ.) ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಮೇಳದಲ್ಲಿ ಸುಮಾರು 25 ಬೆಳೆಗಾರರಿಗೆ ತಮ್ಮ ಮಾವು ಉತ್ಪನ್ನಗಳನ್ನು ಗ್ರಾಹಕರಿಗೆ ನೇರ ಮಾರಾಟ ಮಾಡಲು ನಿಬಂಧನೆಗಳಿಗೊಳಪಟ್ಟಂತೆ ಅವಕಾಶ ಕಲ್ಪಿಸಲಾಗುತ್ತದೆ. ಉತ್ತಮ ಗುಣಮಟ್ಟದ ಹಾಗೂ ನೈಸರ್ಗಿಕವಾದ ಮಾವು ಬೆಳೆಯ ವಿವಿಧ ತಳಿಗಳಾದ ಆಲ್ಫಾನ್ಸೋ, ಬಾದಾಮಿ, ಮಲ್ಲಿಕಾ, ರಸಪುರಿ, ಮಲಗೋವಾ, ಸಿಂಧೂರ, ಕಾಲಾಪಾಡಿ, ತೋತಾಪುರಿ, ಬೆಂಗನಪಲ್ಲಿ, ಶುಗರ್ ಬೇಬಿ ಇತ್ಯಾದಿ ಹಣ್ಣುಗಳು ಸ್ಪರ್ಧಾತ್ಮಕ ಬೆಲೆಯಲ್ಲಿ ಮೇಳದಲ್ಲಿ ಮಾರಾಟಕ್ಕೆ ಲಭ್ಯವಿರುತ್ತದೆ ಎಂದರು.

ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರವೀಣ್, ಸಂಘದ ನಿರ್ದೇಶಕ ಸಿದ್ದರಾಜು, ಪ್ರಗತಿಪರ ಕೃಷಿಕ ವಾಸು ಅವರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net